ಮಡಿಕೇರಿ ಜು.21 : ಕೊಡಗು ಜಿಲ್ಲೆಯಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜು.23 ರಂದು ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕಿನ ಘಟ್ಟ ಪ್ರದೇಶಗಳಲ್ಲಿ 24 ಗಂಟೆಗಳ ಕಾಲ ಸಾಕಷ್ಟು ವ್ಯಾಪಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದಾಗಿ ತಿಳಿಸಲಾಗಿದೆ.








