ಮಡಿಕೇರಿ ಜು.22 : ವಿಧಾನಸಭಾ ಕಲಾಪದಿಂದ ಹತ್ತು ಮಂದಿ ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು.
ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ನಾಪಂಡ ರವಿ ಕಾಳಪ್ಪ, ವಕ್ತಾರ ಮಹೇಶ್ ಜೈನಿ, ನಗರಾಧ್ಯಕ್ಷ ಮನುಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ರಾಜ್ಯ ರೈತ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಯಮುನಾ ಚಂಗಪ್ಪ, ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಪ್ರಮುಖರಾದ ಜಗದೀಶ್, ಎಸ್.ಸಿ.ಸತೀಶ್, ಶ್ವೇತ ಸೇರಿದಂತೆ ಮತ್ತಿತರ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.









