ನಾಪೋಕ್ಲು ಜು.22 : ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಲಾಯಿತು.
ಸಂಸ್ಥೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಕುಟ್ಟಂಚೆಟ್ಟೀರ ಮಾದಪ್ಪ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.
ನಂತರ ಸಭೆಯ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಹಿತವಚನ ನುಡಿಯಾಡಿ ವಿದ್ಯಾರ್ಥಿ ನಾಯಕರಿಗೆ ಶುಭ ಹಾರೈಸಿದರು.
ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಚೋಕಿರ ರತೀಶ್ ತಮ್ಮಯ್ಯ ನೂತನವಾಗಿ ಆಯ್ಕೆ ಆಗಿರುವ ವಿದ್ಯಾರ್ಥಿ ನಾಯಕರಿಗೆ ಪ್ರಮಾಣ ವಚನ ಬೋಧಿಸಿ ತಮ್ಮ ತಮ್ಮ ಕಾರ್ಯದಕ್ಷತೆಯ ಬಗ್ಗೆ ಮಾರ್ಗದರ್ಶನವನ್ನು ನೀಡಿದರು.
ಈ ಸಂದರ್ಭ ವಿದ್ಯಾ ಸಂಸ್ಥೆಯಲ್ಲಿ 10 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆಸಲ್ಲಿಸಿದ ಬಿದ್ದಾಟಂಡ ರಹನಾ ಸಂಪತ್ ಅವರನ್ನು ಶಾಲಾ ಆಡಳಿತ ಮಂಡಳಿ ಪರವಾಗಿ ಶಾಲು ಒದಿಸಿ ಕಿರು ಕಾಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಯ ನಿರ್ದೇಶಕಿ ವಿದ್ಯಾ ಸುರೇಶ್, ಶಾಲಾ ಬೋಧಕ ವೃಂದ ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.
ಬಳಿಕ ವಿದ್ಯಾರ್ಥಿಗಳಿಂದ ನಡೆದ ವಿವಿಧ ಮನರಂಜನಾ ಕಾರ್ಯಕ್ರಮ ಗಮನ ಸೆಳೆಯಿತು.
ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳು ::
ವಿದ್ಯಾರ್ಥಿ ನಾಯಕಿನಾಗಿ ಕೆ.ಎಚ್.ಆಫಿಯ, ಉಪನಾಯಕನಾಗಿ ಬಿಶನ್ ಬಿದ್ದಪ್ಪ, ಕ್ರೀಡಾ ಮಂತ್ರಿ ಆಗಿ ಪಿ.ಆರ್.ಅಸ್ಲಾಂ,ಉಪ ಕ್ರೀಡಾಮಂತ್ರಿಯಾಗಿ ಕೈಲಾಶ್, ಸಾಂಸ್ಕೃತಿಕ ಮಂತ್ರಿಯಾಗಿ ದರ್ಷ ದೇಚಮ್ಮ, ಉಪಸಾಂಸ್ಕೃತಿಕ ಮಂತ್ರಿಯಾಗಿ ದುಂದುಭಿ, ಸ್ವಚ್ಛತಾ ಮಂತ್ರಿಯಾಗಿ ಶರಣ್ಯ, ಉಪ ಸ್ವಚ್ಛತಾ ಮಂತ್ರಿಯಾಗಿ ಅಶ್ರೀಫಾ ಆಯ್ಕೆಯಾದರು.
ವರದಿ : ದುಗ್ಗಳ ಸದಾನಂದ