Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು:  ಮುಖ್ಯಮಂತ್ರಿ ಸಿದ್ದರಾಮಯ್ಯ*  
ಇತ್ತೀಚಿನ ಸುದ್ದಿಗಳು ಕರ್ನಾಟಕ

ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು:  ಮುಖ್ಯಮಂತ್ರಿ ಸಿದ್ದರಾಮಯ್ಯ*  

ಜುಲೈ 22, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ರಫ್ತು ಮಾಡುವುದರಲ್ಲಿ ಮಹಾರಾಷ್ಟ್ರ ಮತ್ತು ತಮಿಳುನಾಡು ಒಂದು ಮತ್ತು ಎರಡನೇ ಸ್ಥಾನದಲ್ಲಿವೆ. ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ರಫ್ತು ಮಾಡುವುದರಲ್ಲಿ ಮೊದಲಿನಿಂದಲೂ ಮುಂಚೂಣಿಯಲ್ಲಿದೆ. ಕೌಶಲ್ಯ ತರಬೇತಿಯುಳ್ಳ ಕಾರ್ಮಿಕರಿದ್ದರೆ ಕೈಗಾರಿಕಾ ಬೆಳವಣಿಗೆಗೆ ಅನುಕೂಲವಾಗುತ್ತದೆ ಎಂಬ ದೃಷ್ಟಿಯಿಂದ ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಾರಂಭಿಸಲಾಗಿತ್ತು. ಈಗ ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು.
ಹೊಸ ಕೈಗಾರಿಕಾ ನೀತಿಯನ್ನು ಸರ್ಕಾರ ಘೋಷಣೆ ಮಾಡಿದಾಗ ಕೈಗಾರಿಕೋದ್ಯಮಿಗಳು ನೀತಿಯನ್ನು ಬೆಂಬಲಿಸಿ ಸ್ವಾಗತಿಸಿದರು. ಈಗಲೂ ಎಲ್ಲರೊಂದಿಗೆ ಚರ್ಚೆ ಮಾಡಿ ರಫ್ತು ಬೆಳವಣಿಗೆಗೆ ಪೂರಕವಾದಂಥ ಕೈಗಾರಿಕಾ ನೀತಿಯನ್ನು ರೂಪಿಸಲು ಕ್ರಮ ವಹಿಸಲಾಗುವುದು.
ಎಂ.ಬಿ.ಪಾಟಲ್ ಅವರು ಕೈಗಾರಿಕಾ ಇಲಾಖೆಯ ನೇತೃತ್ವವನ್ನು ವಹಿಸಿದ್ದು, ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆ ಆಗಬೇಕು ಎನ್ನುವ ಆಶಯವನ್ನು ಹೊಂದಿದ್ದಾರೆ. ಕರ್ನಾಟಕ ಸರ್ಕಾರ ಎಲ್ಲ ರೀತಿಯ ಬೆಂಬಲವನ್ನು ಉದ್ಯಮಿಗಳಿಗೆ ನೀಡಲಿದೆ.
ಕೈಗಾರಿಕೆ ಬೆಳೆದರೆ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಿ ದೇಶದ ಆರ್ಥಿಕತೆ ಬೆಳೆಯಲು ನೆರವಾಗಲಿದೆ. ಜಿಡಿಪಿ ಬೆಳೆದು ರಾಜ್ಯ ಬೆಳೆಯಲು ಸಾಧ್ಯವಾಗಿ ರಾಷ್ಟ್ರದ ಜಿಡಿಪಿಗೆ ದೊಡ್ಡ ಕೊಡುಗೆಯನ್ನು ಕೊಡಲು ಸಾಧ್ಯವಾಗುತ್ತದೆ. ಇವೆಲ್ಲ ಒಂದಕ್ಕೊಂದು ಸಂಬಂಧ ಹೊಂದಿದೆ. ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ ಹೂಡಿಕೆಗಳು ಬರುತ್ತವೆ. ಹೂಡಿಕೆಗಳು ಬಂದಲ್ಲಿ ಕೈಗಾರಿಕೆಗಳು ಬಂದು ನಿರುದ್ಯೋಗ ನಿವಾರಣೆಯಾಗುತ್ತದೆ. ಕರ್ನಾಟಕದಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಲ್ಪಿಸಲಾಗುವುದು. ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿರುವ ಉದ್ಯೋಗಿಗಳನ್ನು ಸೃಷ್ಟಿ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತದೆ.
ಸರ್ಕಾರ 5 ಗ್ಯಾರಂಟಿ ಗಳನ್ನು ಘೋಷಿಸಿದ್ದು, ಯುವನಿಧಿಯಡಿಯಲ್ಲಿ 2022-23 ರಲ್ಲಿ ಪದವೀಧರರಾಗಿ ನಿರುದ್ಯೋಗಿ ಆಗಿರುವವರಿಗೆ ಮೂರು ಸಾವಿರ ರೂ.ಗಳ ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದು. ಡಿಪ್ಲೊಮಾ ಹೊಂದಿದವರಿಗೂ 1,500 ರೂ.ಗಳ ಭತ್ಯೆಯನ್ನು ನೀಡಲಾಗುವುದು. ಬಹುತೇಕ ಡಿಸೆಂಬರ್ ತಿಂಗಳಿನಲ್ಲಿ ಈ ಯೋಜನೆ ಪ್ರಾರಂಭವಾಗಲಿದೆ. ಕೌಶಲ್ಯ ಇಲಾಖೆಯಿಂದ ಕೈಗಾರಿಕೆಗಳಿಗೆ ಅಗತ್ಯವಿರುವ ಉದ್ಯೋಗಿಗಳನ್ನು ತಯಾರು ಮಾಡುವ ಸಲುವಾಗಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಮಾರುಕಟ್ಟೆಗೆ ಸೂಕ್ತವಾಗಿರುವ ಉದ್ಯೋಗಿಗಳನ್ನು ತಯಾರು ಮಾಡಿದರೆ ನಿರುದ್ಯೋಗ ಸಮಸ್ಯೆ ಬಗೆಹರಿಯಲಿದೆ.
ಇಂದು 68 ಉದ್ದಿಮೆಗಳಿಗೆ ಶ್ರೇಷ್ಠ ರಫ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ. ರಫ್ತಿನಲ್ಲಿ ಸಾಧನೆ ಮಾಡಿರುವ ಉದ್ದಿಮೆಗಳಿಗೆ 1992-93 ರಿಂದ ಶ್ರೇಷ್ಠ ರಫ್ತು ಪ್ರಶಸ್ತಿಗಳನ್ನು ನೀಡುವ ಪರಿಪಾಠ ಪ್ರಾರಂಭಿಸಲಾಗಿದೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದ ಉದ್ದಿಮೆಗಳನ್ನು ಆಯ್ಕೆ ಮಾಡಲಾಗಿದೆ.
ರಾಜ್ಯದಲ್ಲಿ ಉದ್ದಿಮೆಗಳ ಪ್ರಾರಂಭಕ್ಕೆ ಹಾಗೂ ಕೈಗಾರಿಕೆಗಳಿಗೆ ಪ್ರೋತ್ಸಾಹದಾಯಕ ವಾತಾವರಣ ಇದೆ. ಪ್ರಶಸ್ತಿ ವಿಜೇತರು ಇತರ ಉದ್ದಿಮೆದಾರರಿಗೆ ಮಾದರಿ ಹಾಗೂ ಸ್ಪೂರ್ತಿಯಾಗಿದ್ದಾರೆ ಎಂದರು.

Follow us Follow us
Share. WhatsApp Facebook Twitter Email Telegram Copy Link

Related Posts

ಪೂಜಾರಿರ ಮೊಣ್ಣಪ್ಪ ಅರೆಭಾಷಿಕ ಯುವ ಜನಾಂಗಕ್ಕೆ ಮಾದರಿ : ಡಾ.ಕಾವೇರಿಮನೆ ಬೋಜಪ್ಪ

ಅಕ್ಟೋಬರ್ 12, 2026

ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿ ಅನಾವರಣ

ಅಕ್ಟೋಬರ್ 12, 2026

ಮಡಿಕೇರಿಯಲ್ಲಿ ಅ.19 ರಂದು ಮಹಿಳಾ ದಸರಾ : ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 12, 2026

ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿ ಅನಾವರಣ

ಅಕ್ಟೋಬರ್ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಅ.12 NEWS DESK : ಪತ್ರಕರ್ತರ ನಡುವೆ ಬಾಂಧವ್ಯ ವೃದ್ಧಿಸಿ, ಸಂಘಟನಾತ್ಮಕವಾಗಿ ಬಲವರ್ಧನೆಗೊಳ್ಳಲು ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದು ಮಡಿಕೇರಿ…

ಮಡಿಕೇರಿಯಲ್ಲಿ ಅ.19 ರಂದು ಮಹಿಳಾ ದಸರಾ : ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 12, 2026

ಬೇಂಗ್ ನಾಡ್ ಕೊಡವ ಸಮಾಜದಲ್ಲಿ ಕೈಲ್ ಪೋದ್ ಒತ್ತೋರ್ಮೆ ಕೂಟ; ಕೊಡವ ಸಂಸ್ಕೃತಿ, ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು: ಚಿರಿಯಪಂಡ ಸುರೇಶ್ ನಂಜಪ್ಪ

ಅಕ್ಟೋಬರ್ 12, 2026

ಸುಂಟಿಕೊಪ್ಪದಲ್ಲಿ ಅ.20ರಂದು 56ನೇ ವರ್ಷದ ಆಯುಧಪೂಜಾ ಸಮಾರಂಭ

ಅಕ್ಟೋಬರ್ 12, 2026

ಸುಂಟಿಕೊಪ್ಪದಲ್ಲಿ ಅ.15ರಂದು 19ನೇ ವರ್ಷದ ಓಣಂ ಆಚರಣೆ

ಅಕ್ಟೋಬರ್ 12, 2026

ಕಂಬಿಬಾಣೆಯಲ್ಲಿ 71ನೇ ವರ್ಷದ ನವರಾತ್ರಿ ಉತ್ಸವಕ್ಕೆ ಚಾಲನೆ: ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

ಅಕ್ಟೋಬರ್ 12, 2026

ಮಡಿಕೇರಿ ದಸರಾದಲ್ಲಿ ಕಾಫಿ ಘಮ: 54 ಮಳಿಗೆಗಳಲ್ಲಿ ಕಾಫಿ ಲೋಕ ಅನಾವರಣ

ಅಕ್ಟೋಬರ್ 12, 2026

ವಿರಾಜಪೇಟೆ ಕಾವೇರಿ ಕಾಲೇಜಿನ ಬಾಲಕರ ತಂಡಕ್ಕೆ ರನ್ನರ್ಸ್ ಟ್ರೋಫಿ

ಅಕ್ಟೋಬರ್ 12, 2026

ಎಸ್‌ಐಆರ್ ವಿರುದ್ಧ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ರಸ್ತೆ ತಡೆ

ಅಕ್ಟೋಬರ್ 12, 2026

ಬೆಂಗಳೂರಿನಿಂದ ಮೈಸೂರಿಗೆ ದಕ್ಷಿಣ ಕರ್ನಾಟಕ ಅಂಚೆ ವಲಯದ ಪ್ರಧಾನ ಕಚೇರಿ ಸ್ಥಳಾಂತರಕ್ಕೆ ತಾತ್ವಿಕ ಒಪ್ಪಿಗೆ

ಅಕ್ಟೋಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.