ಮಡಿಕೇರಿ ಜು.22 : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾ ಘಟಕದ ಸರ್ವ ಸದಸ್ಯರ 2ನೇ ಮಹಾಸಭೆ ಜು.30 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೊಟ್ಟುಕತ್ತೀರ ಪಿ.ಸೋಮಣ್ಣ ತಿಳಿಸಿದ್ದಾರೆ.
ಅಂದು ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆ ಕಾವೇರಿ ಕಲ್ಯಾಣ ಮಂಟಪದ ಆವರಣದಲ್ಲಿ ಸಭೆ ನಡೆಯಲಿದ್ದು, ಸರ್ವ ಸದಸ್ಯರು ಕುಟುಂಬ ಸಹಿತರಾಗಿ ಹಾಜರಾಗಿ ಸಲಹೆ, ಸೂಚನೆ ನೀಡುವಂತೆ ಮನವಿ ಮಾಡಿದರು.
ಸಭೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರನ್ನು ಆಹ್ವಾನಿಸಲಾಗಿದೆ. ಸದಸ್ಯರು ಸ್ಟಾಂಪ್ ಅಳತೆಯ ಭಾವಚಿತ್ರವನ್ನು ತಂದು ತಮ್ಮ ತಮ್ಮ ಗುರುತಿನ ಚೀಟಿಯನ್ನು ಪಡೆದುಕೊಳ್ಳಬಹುದಾಗಿದೆ. ಸಂಘದ ಸದಸ್ಯತ್ವ ಬಯಸುವ ಮಾಜಿ ಸೈನಿಕರು ಸಭೆಗೆ ಹಾಜರಾಗಿ ಸದಸ್ಯತ್ವ ಪಡೆದುಕೊಳ್ಳಬಹುದು ಎಂದರು.
ಹತ್ತನೇ ತರಗತಿ ಪರೀಕ್ಷೆಯಲ್ಲಿ ಸ್ಟೇಟ್ ಸಿಲಬಸ್ ನಲ್ಲಿ ಶೇ.95 ಮೇಲ್ಪಟ್ಟು ಅಂಕ ಪಡೆದ, ಸಿಬಿಎಸ್ ನಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು, ಅಲ್ಲದೆ ಕ್ರೀಡೆ, ಕಲೆ, ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಾಜಿ ಸೈನಿಕರ ಮಕ್ಕಳನ್ನು ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಗುವುದು.
ಇದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಜು.27ರ ಒಳಗೆ ಅಂಕಪಟ್ಟಿಯ ಪ್ರತಿಯೊಂದಿಗೆ ಸಂಘದ ಕಚೇರಿಯಲ್ಲಿ ಅರ್ಜಿ ಸಲ್ಲಿಸುವಂತೆ ಸೋಮಣ್ಣ ಮನವಿ ಮಾಡಿದರು. ಹೆಚ್ಚಿನ ಮಾಹಿತಿಗೆ 91239 80041 ನ್ನು ಸಂಪರ್ಕಿಸಬಹುದು ಎಂದು ಹೇಳಿದರು.
Breaking News
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*
- *ಕಳೆದು ಹೋಗಿದೆ*
- *ಫೆ.27 ಮತ್ತು 28 ರಂದು ಕೊಡವ ಬಲ್ಯನಮ್ಮೆ : ವಿವಿಧ ಸ್ಪರ್ಧೆಗಳಿಗೆ ಆಹ್ವಾನ*
- *ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*