ಮಡಿಕೇರಿ ಜು.22 : ಕರ್ನಾಟಕ ವಿಧಾನಸಭಾ ಕಲಾಪದಿಂದ ಹತ್ತು ಮಂದಿ ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿರುವ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೊಡಗು ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು.
ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಸ್ಪೀಕರ್ ಕ್ರಮವನ್ನು ಖಂಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಸರ್ಕಾರದ ನಡೆಯನ್ನು ಪ್ರಶ್ನಿಸಿದಕ್ಕೆ ಬಿಜೆಪಿ ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವುದು ಸರಿಯಲ್ಲ. ಇದು ಸ್ಪೀಕರ್ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದರು.
ಬೆಲೆ ಏರಿಕೆ ಮೂಲಕ ಜನರ ಮೇಲೆ ಸರಕಾರ ಬರೆ ಎಳೆದಿದೆ. 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಹೇಳಿ ಇದೀಗ ವಿದ್ಯುತ್ ದರ ಏರಿಕೆ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಸೆರೆಸಿಕ್ಕ ಶಂಕಿತ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಪಂಡ ರವಿ ಕಾಳಪ್ಪ, ನಗರಾಧ್ಯಕ್ಷ ಮನುಮಂಜುನಾಥ್, ಉಪಾಧ್ಯಕ್ಷ ಬಿ.ಕೆ.ಜಗದೀಶ್, ಜಿಲ್ಲಾ ವಕ್ತಾರ ಮಹೇಶ್ ಜೈನಿ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್, ರಾಜ್ಯ ರೈತ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಯಮುನಾ ಚಂಗಪ್ಪ, ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ನಗರಸಭಾ ಬಿಜೆಪಿ ಸದಸ್ಯರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Breaking News
- *ಜ.26 ರಂದು ಕೂಡಿಗೆಯಲ್ಲಿ ಮಾನವ ಸರಪಳಿ ಹಾಗೂ ಸೌಹಾರ್ದ ಸಮ್ಮೇಳನ*
- *ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಮೂರ್ನಾಡು ಭಾರತೀಯ ನೃತ್ಯಕಲಾ ಶಾಲೆಯ ವಿದ್ಯಾರ್ಥಿಗಳ ಸಾಧನೆ*
- *ಕಟ್ಟೆಮಾಡು ಪ್ರಕರಣ : ಉಸ್ತುವಾರಿ ಸಚಿವರು, ಶಾಸಕರುಗಳು ತಮ್ಮ ಜವಾಬ್ದಾರಿಯನ್ನು ಪ್ರದರ್ಶಿಸಲಿ*
- *ವಸತಿ ಸಚಿವರನ್ನು ಭೇಟಿ ಮಾಡಿದ ಅಲ್ಪಸಂಖ್ಯಾತ ಮುಖಂಡರು : ಮೂಲ ಸೌಕರ್ಯಗಳ ಕುರಿತು ಚರ್ಚೆ*
- *ಎಂ.ಎಂ.ಸುಪ್ರಿತಾಗೆ ಚಿನ್ನದ ಪದಕ*
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*
- *ಕಳೆದು ಹೋಗಿದೆ*