ಮಡಿಕೇರಿ ಜು.22 : ನಗರದ ಕ್ರೆಸೆಂಟ್ ಶಾಲೆಯಲ್ಲಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳು, ಮಾದಕ ವಸ್ತುಗಳ ವಿಚಾರ ಹಾಗೂ ಪೊಲೀಸ್ ಸಹಾಯವಾಣಿ 112 ಗಳ ಬಗ್ಗೆ ಅರಿವು ಮೂಡಿಸಲಾಯಿತು.
ಈ ಸಂದರ್ಭ ಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ನಂದ ವಿವರಿಸಿದರು. ಮಾದಕ ವಸ್ತುಗಳನ್ನು ಬಳಸದಂತೆ ಮತ್ತು ಸಂಚಾರಿ ನಿಯಮ ಉಲ್ಲಂಘಿಸದಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಸಂಚಾರಿ ಠಾಣೆ ಪೊಲೀಸ್ ಸಿಬ್ಬಂದಿ ಪ್ರಭಾಕರ್ ಹಾಗೂ ಶಾಲಾ ಶಿಕ್ಷಕರು ಹಾಜರಿದ್ದರು.