ಮಡಿಕೇರಿ ಜು.22 : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಕೊಡಗಿನ ಏಕೈಕ ಹಾರಂಗಿ ಜಲಾಶಯದ ನೀರಿನ ಸಂಗ್ರಹ ಮಟ್ಟದಲ್ಲಿ ಏರಿಕೆಯಾಗಿದೆ. ಮುಂಜಾಗೃತಾ ಕ್ರಮವಾಗಿ ಯಾವುದೇ ಕ್ಷಣದಲ್ಲಿ ಜಲಾಶಯದಿಂದ ನದಿಗೆ ನೀರನ್ನು ಹರಿ ಬಿಡುವ ಸಾಧ್ಯತೆ ಇದೆ.
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳಾಗಿದ್ದು, ಈಗಿನ ಮಟ್ಟ 2854.12 ಅಡಿಗಳಾಗಿದೆ. ಜಲಾಶಯದ ಒಳಹರಿವಿನ ಪ್ರಮಾಣ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, 16,970 ಕ್ಯುಸೆಕ್ ನೀರು ಜಲಾಶಯವನ್ನು ಬಂದು ಸೇರುತ್ತಿದೆ. ಮಳೆಯ ಪ್ರಮಾಣ ಮುಂದುವರಿದು, ಒಳಹರಿವು ಮತ್ತಷ್ಟು ಹೆಚ್ಚಿದಲ್ಲಿ ಶನಿವಾರ ರಾತ್ರಿ ಇಲ್ಲವೆ ಭಾನುವಾರ ನದಿಗೆ ನೀರನ್ನು ಹರಿ ಬಿಡುವ ಸಾಧ್ಯತೆ ಇದೆಯೆಂದು ಹಾರಂಗಿ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ ಅವರು ಪತ್ರಿಕೆಗೆ ತಿಳಿಸಿದ್ದಾರೆ.
ಈ ಹಿನ್ನೆಲೆ ಹಾರಂಗಿ ಮತ್ತು ಕಾವೇರಿ ನದಿ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಮತ್ತು ಜನ ಜಾನುವಾರು ರಕ್ಷಣೆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಮನವಿ ಮಾಡಿದ್ದಾರೆ.
ಹಾರಂಗಿ ಜಲಾಶಯ ಒಟ್ಟು 8.5 ಟಿ.ಎಂ.ಸಿ ನೀರಿನ ಸಂಗ್ರಹ ಸಾಮಥ್ರ್ಯ ಹೊಂದಿದ್ದು, ಈಗಾಗಲೇ 7 ಟಿ.ಎಂ.ಸಿ ಪ್ರಮಾಣದ ನೀರು ಸಂಗ್ರಹವಾಗಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಲು 5 ಅಡಿ ಬಾಕಿ ಇದ್ದು, ಕೇವಲ 1.5 ಟಿ.ಎಂ.ಸಿ ಮಾತ್ರವೇ ಬಾಕಿ ಉಳಿದಿದೆ.
ಹಾರಂಗಿ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಾದ ಮಡಿಕೇರಿ ನಗರ, ಗಾಳಿಬೀಡು, ವಣಚಲು, ಕಾಲೂರು, ಹಮ್ಮಿಯಾಲ, ಸೂರ್ಲಬ್ಬಿ, ಹಚ್ಚಿನಾಡು, ಮಕ್ಕಂದೂರು, ಮಾದಾಪುರ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಪರಿಣಾಮ ಕೂಟುಹೊಳೆ, ಹಟ್ಟಿಹೊಳೆ, ಕಕ್ಕೆಹೊಳೆ, ಮಾದಾಪುರ ಹೊಳೆಗಳಲ್ಲಿ ನೀರಿನ ಪ್ರಮಾಣ ಗಣನೀಯ ಏರಿಕೆ ಕಂಡಿದೆ. ಹೀಗಾಗಿ ಹಾರಂಗಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರಿನ ಒಳ ಹರಿವು ಕಂಡು ಬಂದಿದೆ.
::: ನೀರಿನ ಮಟ್ಟ :::
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳಾಗಿದ್ದು, ಇಂದಿನ ಮಟ್ಟ 2854.12 ಅಡಿಗಳು.
ಜಲಾಶಯದ ನೀರಿನ ಒಳಹರಿವು 16,970 ಕ್ಯುಸೆಕ್, ಹೊರ ಹರಿವು ನದಿಗೆ 50 ಕ್ಯುಸೆಕ್.
::: ಪ್ರವಾಹ ಮುನ್ನೆಚ್ಚರಿಕೆ :::
ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ. ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿರುತ್ತದೆ. ಜಲಾಶಯವು ಶೀಘ್ರವೇ ಗರಿಷ್ಟ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಆದ್ದರಿಂದ ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಕಾವೇರಿ ನೀರಾವರಿ ನಿಗಮ ನಿಯಮಿತ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
Breaking News
- *ಸುಂಟಿಕೊಪ್ಪದಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ*
- *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ*
- *ಕೊಡಗು ಹಿತರಕ್ಷಣಾ ವೇದಿಕೆಯಿಂದ ಸಂಭ್ರಮದ 76ನೇ ಗಣರಾಜ್ಯೋತ್ಸವ ಆಚರಣೆ*
- *ರಾಜಾಸೀಟು ಸೊಬಗಿಗೆ ಮನಸೋತ ಉಸ್ತುವಾರಿ ಸಚಿವರು*
- *ಸಿಕ್ಕ ಸಿಕ್ಕ ವಾಹನಗಳ ಮೇಲೆ ಒಂಟಿ ಸಲಗ ದಾಳಿ*
- *ಕೊಡ್ಲಿಪೇಟೆ ನಂದಿಪುರ ಕೆರೆ ಅಭಿವೃದ್ಧಿ : ಗ್ಯಾರಂಟಿ ಯೋಜನೆಗಳ ಮೂಲಕ ಭ್ರಷ್ಟಚಾರವಿಲ್ಲದೆ ಜನರಿಗೆ ನೇರವಾಗಿ ಹಣ : ಸಚಿವ ಎನ್.ಎಸ್.ಭೋಸರಾಜು*
- *ಸಿಎನ್ಸಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಕೊಡಗು ವಿಶ್ವವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ಧಿ ಡಿಪ್ಲೊಮೋ ಕೋರ್ಸ್ ಲೋಕಾರ್ಪಣೆ : ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಬೇಕು : ಸಚಿವ ಎನ್ ಎಸ್ ಭೋಸರಾಜು ಕರೆ*
- *ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆ : ಸಮಸ್ಯೆಗಳ ಪರಿಹಾರಕ್ಕೆ ಸಚಿವ ಎನ್.ಎಸ್.ಭೋಸರಾಜು ಸೂಚನೆ*
- *ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ ಗುರುವಂದನಾ ಕಾರ್ಯಕ್ರಮ*