ಮಡಿಕೇರಿ ಜು.23 : ಕೊಡವ ಹಾಕಿ ಅಕಾಡೆಮಿಯ ಪ್ರಮುಖರು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡರನ್ನು ಭೇಟಿಯಾಗಿ ನೆನಪಿನ ಕಾಣಿಕೆ ನೀಡಿ ಅಭಿನಂದಿಸಿದರು.
ಈ ಸಂದರ್ಭ ಮಾತನಾಡಿದ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಬೋಪಣ್ಣ ಹಾಗೂ ಉಪಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಕೊಡಗು ಜಿಲ್ಲೆ ಕ್ರೀಡಾ ಕಲಿಗಳ ನಾಡಾಗಿದ್ದು, ನೂರಾರು ಹಾಕಿ ಪಟುಗಳು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ ಎಂದರು.
ಹಾಕಿ ಅಕಾಡೆಮಿ ಹಾಕಿಯನ್ನು ಉತ್ತೇಜಿಸಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬರುತ್ತಿದೆ. ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಿದೆ, ಈ ಕಾರ್ಯಕ್ಕೆ ಶಾಸಕರು ಸಂಪೂರ್ಣ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಕ್ಷೇತ್ರದಲ್ಲಿರುವ ಮೈದಾನ ಹಾಗೂ ಕ್ರೀಡಾಂಗಣಗಳ ಅಭಿವೃದ್ಧಿಗೂ ಒತ್ತು ನೀಡಬೇಕೆಂದು ಗಮನ ಸೆಳೆದರು.
ಹಾಕಿ ಅಕಾಡೆಮಿಯ ಜಂಟಿ ಕಾರ್ಯದರ್ಶಿ ಚೆಯ್ಯಂಡ ಸತ್ಯ ಗಣಪತಿ, ನಿರ್ದೇಶಕರುಗಳಾದ ಕುಲ್ಲೇಟಿರ ಬೇಬ ಹಾಗೂ ನೆರಪಂಡ ಹರ್ಷ ಉಪಸ್ಥಿತರಿದ್ದರು.








