ಮಡಿಕೇರಿ ಜು.23 : ಚಿನ್ನಾಭರಣ ಕಳ್ಳತನ ಮಾಡಿದ ಆರೋಪದಡಿ ಮಹಿಳೆಯೊಬ್ಬರನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ.
ಕರ್ಕಳ್ಳಿ ಗ್ರಾಮದ ನಿವಾಸಿ ಜಯಂತಿ ಬಂಧಿತ ಆರೋಪಿಯಾಗಿದ್ದು, ಇವರಿಂದ 120 ಗ್ರಾಂ ನಷ್ಟು ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಸೋಮವಾರಪೇಟೆ ಜೂನಿಯರ್ ಕಾಲೇಜು ರಸ್ತೆಯ ಕೆ.ರಾಜೀವನ್ ಎಂಬುವವರ ಮನೆ ಕೆಲಸ ಮಾಡುತ್ತಿದ್ದ ಜಯಂತಿ, ಮಾಲೀಕರ ಮನೆಯಲ್ಲೇ ಕಳ್ಳತನ ಮಾಡಿದ್ದಳು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಚಿನ್ನಾಭರಣ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಳು.
ಆರೋಪಿ ಜಯಂತಿಯನ್ನು ಬಂಧಿಸಿದ ಪೊಲೀಸರು, ಮಾರಾಟ ಮಾಡಿದ್ದ ಚಿನ್ನಾಭರಣವನ್ನು ವಶಪಡಿಸಿಕೊಂಡರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಎಎಸ್‌ಪಿ ಸುಂದರ್ ರಾಜ್ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ ಗಂಗಾಧರಪ್ಪ ನೇತೃತ್ವದಲ್ಲಿ, ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್, ಪಿಎಸ್‌ಐಗಳಾದ ರಮೇಶ್, ವಿರೂಪಾಕ್ಷ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Breaking News
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*
- *ವೀರ ಸೇನಾನಿಗಳಿಗೆ ಅಗೌರವ : ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆ ಖಂಡನೆ : ಆರೋಪಿಯ ಗಡಿಪಾರಿಗೆ ಆಗ್ರಹ*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*
- *ನ.29ರಂದು ಕೊಡಗು ಜಿಲ್ಲಾ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ*