ಕರಿಕೆ ಜು.24 : ಭಾರೀ ಮಳೆಯಿಂದಾಗಿ ಕರಿಕೆಯ ಬಾಳೆ ಬಳಪು-ಕುಂಡತ್ತಿಕಾನ ಕಾಲೋನಿಯ ಹೊಸ ರಸ್ತೆ ಕುಸಿದಿದೆ. ಚರಂಡಿ ನಿರ್ಮಾಣ ಮಾಡದೆ ಇರುವುದರಿಂದ ಮತ್ತು ತೋಡಿಗೆ ಮೋರಿ ನಿರ್ಮಿಸದೆ ಇರುವುದರಿಂದ ರಸ್ತೆ ಕುಸಿದಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಜನ ಸಂಚಾರ ಅಸಾಧ್ಯವಾಗಿದ್ದು, ಅತಂತ್ರ ಪರಿಸ್ಥಿತಿ ಎದುರಾಗಿದೆ. ಈ ಹಿಂದೆಯೇ ಹಲವು ಬಾರಿ ಗ್ರಾ.ಪಂ ಗೆ ದೂರು ನೀಡಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲವೆಂದು ಆರೋಪಿಸಿರುವ ಸ್ಥಳೀಯರು, ಜಿಲ್ಲಾಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಕಾಮಗಾರಿ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.









