Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಧ್ವನಿ ಇಲ್ಲದವರಿಗೆ ಧ್ವನಿ ಕೊಡುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಧ್ವನಿ ಇಲ್ಲದವರಿಗೆ ಧ್ವನಿ ಕೊಡುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಜುಲೈ 24, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಮಹಾತ್ಮಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇವತ್ತಿನ ಬಹಳಷ್ಟು ಪತ್ರಕರ್ತರು ಪತ್ರಿಕಾ ವೃತ್ತಿಯ ಆಶಯಕ್ಕೆ ತಕ್ಕಂತೆ ಇದ್ದೇವಾ? ಇಲ್ಲವಾ? ಎನ್ನುವ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ.
ಸಮಾಜದಲ್ಲಿ ಇನ್ನೂ ಶೇ25 ರಷ್ಟು ಮಂದಿಗೆ ಶಿಕ್ಷಣ ಸಿಕ್ಕಿಲ್ಲ. ಆರ್ಥಿಕ ಅಸಮಾನತೆ ಇನ್ನೂ ಹೆಚ್ಚಾಗಿದೆ. ಹೀಗಾಗಿ ಅವಕಾಶ ವಂಚಿತರನ್ನು ಮುಖ್ಯವಾಹಿನಿಗೆ ತರುವ, ಸಮಾಜದ ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದ್ದೇನೆ.
ಸಾಮಾಜಿಕ ಅಸಮಾನತೆ ಹಿಂದಿನಿಂದ ಸಾಂಪ್ರದಾಯಿಕವಾಗಿ ನಡೆದುಕೊಂಡು ಬಂದಿದೆ. ಹೀಗಾಗಿ ಸಮಾಜದ ಬಹುಪಾಲು ಮಂದಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಮತ್ತು ತಾರತಮ್ಯಕ್ಕೆ ಬಲಿಯಾಗಿದ್ದಾರೆ. ಇದಕ್ಕಾಗಿಯೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಅನುಷ್ಠಾನಗೊಳ್ಳುವ ಹಿಂದಿನ ದಿನ ತಾವು ಮಾಡಿದ ಐತಿಹಾಸಿಕ ಭಾಷಣದಲ್ಲಿ, “ಆರ್ಥಿಕ-ಸಾಮಾಜಿಕ ಸ್ವಾತಂತ್ರ್ಯ ಸಿಗದೆ ಕೇವಲ ದೇಶಕ್ಕೆ ಆಡಳಿತಾತ್ಮಕ, ರಾಜಕೀಯ ಸ್ವಾತಂತ್ರ್ಯ ಸಿಕ್ಕರೆ ಅಸಮಾನತೆಗೆ ಬಲಿಯಾದ ಜನ ಮುಂದೊಂದು ದಿನ ಈ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡಿಬಿಡಬಹುದು” ಎಂದಿದ್ದರು.
ದುಡಿಯುವ ವರ್ಗಗಳು ಹಸಿವಿನಿಂದ ಮಲುಗಿದರೂ ಪರ್ವಾಗಿಲ್ಲ, ಅನ್ನಭಾಗ್ಯ ಮಾತ್ರ ಜಾರಿ ಮಾಡಬಾರದು ಎನ್ನುವ ಹೊಟ್ಟೆ ತುಂಬಿದವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು.
ಜನರ ಜೇಬಿನಲ್ಲಿ ಹಣ ಇದ್ದರೆ ಮಾತ್ರ ದೇಶದ ಆರ್ಥಿಕತೆ ಬೆಳವಣಿಗೆ ಕಾಣುತ್ತದೆ. ಈ ಕಾರಣಕ್ಕೇ ನಮ್ಮ ಸರ್ಕಾರ ದುಡಿಯುವ ಜನರ ಜೇಬಿನಲ್ಲಿ ಹಣ ಇರುವ ಕಾರ್ಯಕ್ರಮಗಳನ್ನು ನೀಡಿದೆ. ಇದನ್ನು ವಿರೋಧಿಸುವ ಬಿಜೆಪಿಯವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು. ಹೀಗಾಗಿ ಪತ್ರಿಕಾ ವೃತ್ತಿಯಲ್ಲಿರುವವರು ಬಡವರ ಪರವಾದ, ಜನರ ಪರವಾದ ಯೋಜನೆಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದರು.
ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ, ಡಾ.ಆರ್.ಪೂರ್ಣಿಮಾ, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ, ಹಿರಿಯ ಪತ್ರಕರ್ತರು ಹಾಗೂ ಈ-ದಿನ‌ ಸುದ್ದಿ ಸಂಸ್ಥೆಯ ಮುಖ್ಯಸ್ಥರಾದ ಡಿ.ಉಮಾಪತಿ, ಸುವರ್ಣ ನ್ಯೂಸ್ ಪ್ರಧಾನ ಸಂಪಾದಕರಾದ ರವಿ ಹೆಗಡೆ, ವಾರ್ತಾ ಇಲಾಖೆ ಆಯುಕ್ತರಾದ ಡಾ.ಹೇಮಂತ್ ಎಂ ನಿಂಬಾಳ್ಕರ್ ಅವರು ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕುಶಾಲನಗರ ಸರ್ಕಾರಿ ಶಾಲೆಯಲ್ಲಿ ಕಳ್ಳತನ, ಹಾನಿ : ದುಷ್ಕೃತ್ಯಕ್ಕೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಖಂಡನೆ

ಅಕ್ಟೋಬರ್ 13, 2026

ಬಡ ಕುಟುಂಬಗಳಿಗೆ ವಸತಿ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ; ನಿವೇಶನ ರಹಿತ ಕುಟುಂಬಗಳಿಗೆ ಶೀಘ್ರ ಹಕ್ಕುಪತ್ರ ವಿತರಿಸಲು ಎಚ್.ಆರ್. ಪರಶುರಾಮ್ ಒತ್ತಾಯ

ಅಕ್ಟೋಬರ್ 13, 2026

ಅ.15ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ; ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಹೋರಾಟ: ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಅಕ್ಟೋಬರ್ 13, 2026

ಬಡ ಕುಟುಂಬಗಳಿಗೆ ವಸತಿ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ; ನಿವೇಶನ ರಹಿತ ಕುಟುಂಬಗಳಿಗೆ ಶೀಘ್ರ ಹಕ್ಕುಪತ್ರ ವಿತರಿಸಲು ಎಚ್.ಆರ್. ಪರಶುರಾಮ್ ಒತ್ತಾಯ

ಅಕ್ಟೋಬರ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 13: ಪೊನ್ನಂಪೇಟೆ ತಾಲ್ಲೂಕಿನ ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತ ಬಡ…

ಅ.15ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ; ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಹೋರಾಟ: ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಅಕ್ಟೋಬರ್ 13, 2026

ಟಿ.ಪಿ.ರಮೇಶ್ ಅವರ 75ನೇ ಜನ್ಮ ದಿನೋತ್ಸವ: ಕ್ರಿಯಾಶೀಲತೆ, ಶ್ರದ್ಧೆ, ಪ್ರಾಮಾಣಿಕತೆಯಿಂದ ಗುರಿ ಸಾಧನೆ ಸಾಧ್ಯ: ಶಾಸಕ ಎ.ಎಸ್.ಪೊನ್ನಣ್ಣ

ಅಕ್ಟೋಬರ್ 13, 2026

ಕೊಡಗು ಸೈನಿಕ ಶಾಲೆಯಲ್ಲಿ ಅಖಿಲ ಭಾರತ ಸೈನಿಕ ಶಾಲೆಗಳ ‘ಗ್ರೂಪ್ ಹೆಚ್’ ರಾಷ್ಟ್ರೀಯ ಕ್ರೀಡಾಕೂಟ-2026ಕ್ಕೆ ಚಾಲನೆ

ಅಕ್ಟೋಬರ್ 13, 2026

ಸೋಮೇಶ್ವರ ದೇವಾಲಯದಲ್ಲಿ ತರಕಾರಿ ಅಲಂಕಾರದಲ್ಲಿ ಕಂಗೊಳಿಸಿದ ಶಕ್ತಿಪಾರ್ವತಿ ದೇವಿ

ಅಕ್ಟೋಬರ್ 13, 2026

ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಮಾನ ಮಹತ್ವ ನೀಡಿ: ನ್ಯಾಯಾಧೀಶ ಎ. ವಿಶ್ವನಾಥ್

ಅಕ್ಟೋಬರ್ 13, 2026

ರಾಷ್ಟ್ರೀಯ ಹಿರಿಯ ಕ್ರೀಡಾಪಟುಗಳ ಚಾಂಪಿಯನ್‌ಶಿಪ್‌ನಲ್ಲಿ ಕೊಡಗಿನ ಕ್ರೀಡಾಪಟುಗಳ ಸಾಧನೆ

ಅಕ್ಟೋಬರ್ 13, 2026

ಪೂಜಾರಿರ ಮೊಣ್ಣಪ್ಪ ಅರೆಭಾಷಿಕ ಯುವ ಜನಾಂಗಕ್ಕೆ ಮಾದರಿ : ಡಾ.ಕಾವೇರಿಮನೆ ಬೋಜಪ್ಪ

ಅಕ್ಟೋಬರ್ 12, 2026

ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿ ಅನಾವರಣ

ಅಕ್ಟೋಬರ್ 12, 2026

ಮಡಿಕೇರಿಯಲ್ಲಿ ಅ.19 ರಂದು ಮಹಿಳಾ ದಸರಾ : ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.