ಮಡಿಕೇರಿ ಜು.24 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜು.25 ರಂದು ಪತ್ರಕರ್ತರು ಸೇರಿದ್ದಂತೆ ಒಟ್ಟು 80 ಸಾರ್ವಜನಿಕರು ರಕ್ತದಾನ ಮಾಡಲಿದ್ದಾರೆ.
ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ, ಪಾಲಿಬೆಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಹುಣಸೂರಿನ ಕಾವೇರಿ ಆಸ್ಪತ್ರೆ, ಕೊಡಗು ಹಿಂದೂ ಮಲಯಾಳಿ ಸಮಾಜ ಪಾಲಿಬೆಟ್ಟ ಉಪಸಮಿತಿ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರಕ್ತನಿಧಿ ಕೇಂದ್ರ, ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರ ಹಾಗೂ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮ ಸಂಚಾಲಕ ಪುತ್ತಂ ಪ್ರದೀಪ್ ಬಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗ್ಗೆ 10 ಗಂಟೆಗೆ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ. ಪೂವಯ್ಯ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ. ಪಾಲಿಬೆಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಅಜ್ಜಿನಿಕಂಡ ಶ್ಯಾಮ್‍ಚಂದ್ರ ಉದ್ಘಾಟಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಲೋಹಿತ್, ಕೊಡಗು ಹಿಂದೂ ಮಲಯಾಳಿ ಸಮಾಜ ಪಾಲಿಬೆಟ್ಟ ಉಪಸಮಿತಿ ಅಧ್ಯಕ್ಷ ವಿ.ಬಿ. ರಿನಿಲ್, ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಕೆ.ಕೆ. ರೆಜಿತ್‍ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ.ಕೆ.ಪಿ. ಕರುಂಬಯ್ಯ ಪಾಲ್ಗೊಳ್ಳಲಿದ್ದಾರೆ.
ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಲೋಹಿತ್, ದಂತ ವೈದ್ಯ ಡಾ.ಜಗದೀಶ್, ನಿವೃತ್ತ ಪೋಸ್ಟ್ ಮಾಸ್ಟರ್ ಕೆ. ರಘು, 27ನೇ ಬಾರಿ ರಕ್ತದಾನ ಮಾಡುತ್ತಿರುವ ವಿ.ವಿ. ಅರುಣ್‍ಕುಮಾರ್, 25ನೇ ಬಾರಿ ರಕ್ತದಾನ ಮಾಡುತ್ತಿರುವ ಟಿ.ಎಂ. ಪ್ರಜಿತ್, 15ನೇ ಬಾರಿ ರಕ್ತದಾನ ಮಾಡುತ್ತಿರುವ ಟಿ.ಎಂ. ಪ್ರಿಯಾ ಅವರನ್ನು ಸನ್ಮಾನಿಸಲಾಗು ತ್ತದೆ.









