ಮಡಿಕೇರಿ ಜು.24 : ಮಡಿಕೇರಿ ನಗರಸಭೆ ಸಿಬ್ಬಂದಿಗಳ ಕೊರತೆಯನ್ನು ಎದುರಿಸುತ್ತಿದೆ, ಇದರ ನಡುವೆಯೇ ಇರುವ ಸಿಬ್ಬಂದಿಗಳನ್ನು ಸರ್ಕಾರದ “ಗೃಹಲಕ್ಷ್ಮಿ” ಯೋಜನೆಯ ಸೇವೆಗಾಗಿ ನಿಯೋಜಿಸಿ ಸಾರ್ವಜನಿಕರಿಗೆ ತೊಂದರೆ ನೀಡಲಾಗುತ್ತಿದೆ ಎಂದು ನಗರಸಭಾ ಮಾಜಿ ಉಪಾಧ್ಯಕ್ಷರಾದ ಲೀಲಾ ಶೇಷಮ್ಮ ಆರೋಪಿಸಿದ್ದಾರೆ.
ನಗರಸಭೆಗೆ ಭೇಟಿ ನೀಡಿದ್ದ ಅವರು ಕಚೇರಿಯಲ್ಲಿ ಸಿಬ್ಬಂದಿಗಳಿಲ್ಲದೆ ಖಾಲಿ ಕುರ್ಚಿಗಳಿರುವುದನ್ನು ಮತ್ತು ಅರ್ಜಿದಾರರು ಪರದಾಡುತ್ತಿರುವುದನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು. ಅರ್ಜಿದಾರರು ಪ್ರತಿದಿನ ಅಲೆದಾಡಬೇಕಾದ ದುಸ್ಥಿತಿ ಬಂದೊದಗಿದೆ, ಫಾರಂ ನಂ.3 ಸೇರಿದಂತೆ ಯಾವುದೇ ಅರ್ಜಿಗಳು ವಿಲೇವಾರಿಯಾಗುತ್ತಿಲ್ಲ. ಕಂದಾಯ ಸ್ವೀಕಾರ ಮಾಡಲು ಕೂಡ ಅಧಿಕಾರಿಗಳಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ನಗರಸಭೆಯಲ್ಲಿ ಶೇ.50 ಕ್ಕಿಂತಲೂ ಅಧಿಕ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕೊರತೆ ಇದೆ. ಇದರ ನಡುವೆಯೇ ಇರುವ ಸಿಬ್ಬಂದಿಗಳನ್ನು “ಗೃಹಲಕ್ಷ್ಮಿ” ಯೋಜನೆಯೆ ಸೇವೆಗೆ ನಿಯೋಜಿಸಲಾಗಿದೆ. ಇದರಿಂದ ನಗರಸಭೆಯ ಕೆಲಸ ಕಾರ್ಯಗಳಿಗೆ ತೀವ್ರ ಹಿನ್ನಡೆಯಾಗಿದೆ. ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಅನೇಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮ್ಮ ಕಷ್ಟ ಹೇಳಿಕೊಳ್ಳಲು ನಗರಸಭೆಗೆ ಬಂದರೆ ಸಿಬ್ಬಂದಿಗಳೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
“ಗೃಹಲಕ್ಷ್ಮಿ” ಯೋಜನೆಗೆ ಸರ್ಕಾರ ಹೊರ ಗುತ್ತಿಗೆ ಆಧಾರದಲ್ಲಿ ಹೊಸ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಿ. ಕೊರತೆಯ ನಡುವೆ ಒತ್ತಡದಿಂದ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೇ ಮತ್ತೆ ಒತ್ತಡ ಹೇರುವುದು ಸರಿಯಲ್ಲ. ಆಡಳಿತ ವ್ಯವಸ್ಥೆಯ ಧ್ವಂಧ್ವ ನಿಲುವುಗಳಿಂದಾಗಿ ನಗರದ ಜನತೆ ಕಷ್ಟ ಎದುರಿಸಬೇಕಾಗಿದೆ, ಅರ್ಜಿದಾರರು ಗಾಳಿ, ಚಳಿ, ಮಳೆಯಲ್ಲಿ ಅಲೆದಾಡಬೇಕಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಗಮನಹರಿಸಿ ನಗರಸಭಾ ಸಿಬ್ಬಂದಿಗಳನ್ನು “ಗೃಹಲಕ್ಷ್ಮಿ” ಯೋಜನೆಯ ಸೇವೆಯಿಂದ ಮುಕ್ತಗೊಳಿಸಬೇಕು ಮತ್ತು ನಗರಸಭೆಯ ಸೇವೆ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಲೀಲಾ ಶೇಷಮ್ಮ ಒತ್ತಾಯಿಸಿದರು.
ಕ್ಷೇತ್ರದ ಶಾಸಕರು ಕೂಡ ನಗರಸಭೆಯಲ್ಲಿರುವ ಸಿಬ್ಬಂದಿಗಳ ಕೊರತೆಯನ್ನು ತುಂಬಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*