ಸುಂಟಿಕೊಪ್ಪ ಜು.24: ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಸುಂಟಿಕೊಪ್ಪದ ಪಕ್ಷದ ಕಚೇರಿಯಲ್ಲಿ ಚುನಾವಣಾ ಪೂರ್ವಭಾವಿ ಸಭೆ ನಡೆಯಿತು.
ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮಾತನಾಡಿ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯೂ ಮುಂದಿನ ದಿನಗಳಲ್ಲಿ ನಡೆಯಲ್ಲಿದ್ದು, ಪಕ್ಷದ ಕಾರ್ಯಕರ್ತರು ಚುನಾವಣೆಗೆ ಸನ್ನದ್ಧರಾಗಬೇಕು. ಪಕ್ಷವನ್ನು ತಳಮಟ್ಟದಿಂದಲೇ ಸಂಘಟಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಎರಡನೇ ಹಂತದ ಆಯ್ಕೆ ಪ್ರಕ್ರಿಯೆಗೆ ನಮ್ಮ ಪಕ್ಷದವರು ಸ್ಪರ್ದೆಗೆ ಇಳಿಯಬೇಕು. ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲವನ್ನು ಪಡೆದು ಅಧಿಕಾರ ನಡೆಸಲು ಒಮ್ಮತದಿಂದ ಸನ್ನದರಾಗಿರುವಂತೆ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು. ಕಳೆದ 2 ಅವಧಿಯಲ್ಲೂ ಕಾಂಗ್ರೆಸ್ ಜೆಡಿಎಸ್ ಬೆಂಬಲವನ್ನು ನೀಡುತ್ತಾ ಬರುತ್ತಿದ್ದು, ಈ ಬಾರೀ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲ ಪಡೆದು ಅಧಿಕಾರಿ ಪ್ರಯತ್ನಿಸಲು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ನಾಯಕ ಅಬ್ರಾಹರ್, ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್, ಕೊಡಗು ಕಾರ್ಯದರ್ಶಿ ಬಶೀರ್, ಪಂಚಾಯಿತಿ ಸದಸ್ಯೆ ನಾಗರತ್ನ, ಮನ್ಸೂರ್, ಕೆ.ಎ.ಉಸ್ಮಾನ್, ನಗರಾಧ್ಯಕ್ಷ ಬಾಶಿತ್, ಹಾಗೂ ಕೆ.ಎ.ಲತೀಫ್, ಪಂಚಾಯಿತಿ ಸದಸ್ಯರುಗಳಾದ ಹಸೀನಾ, ಮಂಗಳಾಮ್ಮ ಹಾಗೂ ಕಾರ್ಯಕರ್ತರು ಇದ್ದರು.









