ನಾಪೋಕ್ಲು ಜು.25 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಪಾಜೆ ಸಂಸ್ಥೆಯ 2022 -23ನೇ ಸಾಲಿಗೆ ವಾರ್ಷಿಕ ಮಹಾಸಭೆಯು ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆಯಿತು.
ಶಾಲೆಯ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಸಂಪಾಜೆ ಸಂಸ್ಥೆಯ ಅಧ್ಯಕ್ಷರಾದ ಎಂ.ಧನಂಜಯ ವಹಿಸಿದ್ದರು.
ಸಭೆಯಲ್ಲಿ ಮುಖ್ಯವಾಗಿ ಕೇಂದ್ರ ಕಚೇರಿಯಿಂದ ಹಾಗೂ ಗ್ರಾಮ ಪಂಚಾಯಿತಿಗಳಿಂದ ದೊರೆಯಬೇಕಾಗಿರುವ ಅನುದಾನಗಳ ಬಗ್ಗೆ ಚರ್ಚಿಸಿ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯುವಂತೆ, ಈ ವರ್ಷ ನಡೆಸಬೇಕಾಗಿರುವ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು.
ಜಿಲ್ಲಾ ಪ್ರಧಾನ ಆಯುಕ್ತ ಬೇಬಿ ಮ್ಯಾತ್ಯು, ಕೆ ಪಿ ಎಸ್ ಎಸ್ ಡಿಎಮ್ ಸಿ ಉಪಾಧ್ಯಕ್ಷ ಹಾಗೂ ಭಾರತ್ ಸ್ಕೌಟ್ ಗೈಡ್ಸ್ ಎಡಿಸಿ ತರಬೇತಿ ಹೊಂದಿರುವ ಕೆ.ಎ. ಹಾರಿಸ್, ಉಪ ಪ್ರಾಂಶುಪಾಲ ಶಿವಣ್ಣ, ಜಿಲ್ಲಾ ಸಂಘಟಕರಾದ ದಮಯಂತಿ, ಜಿಲ್ಲಾ ಕಾರ್ಯದರ್ಶಿ ವಸಂತಿ, ಸ್ಕೌಟ್ ಮತ್ತು ಗೇಟ್ಸ್ ದಳ ನಡೆಸುತ್ತಿರುವ ಶಿಕ್ಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಕೆ.ಬಿ ಉಷಾರಾಣಿ ಸ್ವಾಗತಿಸಿ ವರದಿ ವಾಚಿಸಿದರು. ಬಳಿಕ ಪ್ರಸಕ್ತ ಸಾಲಿನ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಖಜಾಂಚಿಗಳಾದ ಬಿ.ಕೆ. ಗಂಗಮ್ಮ ಲೆಕ್ಕಪತ್ರ ಮಂಡಿಸಿ ಅಂದಾಜು ಆಯವ್ಯ ಮಂಡಿಸಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.
ವರದಿ :ಝಕರಿಯ ನಾಪೋಕ್ಲು








