ಮಡಿಕೇರಿ ಜು.25 : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸರಾಜು ಹಾಗೂ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಮಂಗಳವಾರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದರು. ಭಾಗಮಂಡಲ, ಬೆಂಗೂರು, ಚೆರಂಬಾಣೆ ಮತ್ತಿತರ ಪ್ರದೇಶಗಳನ್ನು ಪರಿಶೀಲಿಸಿ ಮಾಹಿತಿ ಪಡೆದರು.
ಈ ಸಂದರ್ಭ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್‍ರಾಜಾ ಹಾಗೂ ಇತರ ಅಧಿಕಾರಿಗಳು ಇದ್ದರು.