Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಜು.28 ರವರೆಗೆ ಮಳೆ ಸಾಧ್ಯತೆ : ಅಧಿಕಾರಿಗಳು ಸನ್ನದ್ಧರಾಗಿರಿ, ಪರಿಹಾರಕ್ಕೆ ಹಣದ ಕೊರತೆ ಇಲ್ಲ : ಕಂದಾಯ ಸಚಿವ ಕೃಷ್ಣಬೈರೇ ಗೌಡ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಜು.28 ರವರೆಗೆ ಮಳೆ ಸಾಧ್ಯತೆ : ಅಧಿಕಾರಿಗಳು ಸನ್ನದ್ಧರಾಗಿರಿ, ಪರಿಹಾರಕ್ಕೆ ಹಣದ ಕೊರತೆ ಇಲ್ಲ : ಕಂದಾಯ ಸಚಿವ ಕೃಷ್ಣಬೈರೇ ಗೌಡ

ಜುಲೈ 25, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜು.25 : ರಾಜ್ಯದ ವಿವಿಧೆಡೆ ಜು.28 ರವರೆಗೆ ಮಳೆ ಮುಂದುವರೆಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಧಿಕಾರಿಗಳು ಪ್ರತಿಕ್ಷಣ ಸನ್ನದ್ಧರಾಗಿರಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇ ಗೌಡ ತಿಳಿಸಿದ್ದಾರೆ.NEWSDESK
ಮಡಿಕೇರಿಯಲ್ಲಿ ಮಳೆಹಾನಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಒಂದು ವಾರದಿಂದ ರಾಜ್ಯವ್ಯಾಪಿ ಉತ್ತಮ ಮಳೆಯಾಗಿದೆ. ರಾಜ್ಯದ ನಾಲ್ಕು ಜಲಾಶಯಗಳು ಶೇ.50 ರಷ್ಟು ಭರ್ತಿಯಾಗಿವೆ. ಅತಿಮಳೆಯಿಂದ ದೊಡ್ಡ ಪ್ರಮಾಣದ ಹಾನಿಯಾಗದಿದ್ದರೂ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಮತ್ತು ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದರು..NEWSDESK
ರಾಜ್ಯದ ಯಾವುದೇ ಜಿಲ್ಲೆಯ ಜಿಲ್ಲಾಧಿಕಾರಿಗಳು ಮಳೆಹಾನಿ ಪರಿಹಾರ ಕೋರಿ ಮನವಿ ಸಲ್ಲಿಸಿದರೆ ಹಣ ನೀಡಲು ಸರ್ಕಾರ ಸಿದ್ಧವಿದೆ. ಪರಿಹಾರ ನೀಡಲು ಹಣದ ಕೊರತೆಯಿಲ್ಲ. ರಾಜ್ಯವ್ಯಾಪಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಮಳೆಹಾನಿ ಪರಿಹಾರದ ಹಣ ಒಟ್ಟು 540 ಕೋಟಿ ರೂ.ಗಳಿದೆ ಎಂದು ತಿಳಿಸಿದರು..NEWSDESK
::: ಉಳಿಕೆ ಸರಿಯಲ್ಲ :::
ಕೊಡಗು ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಕಳೆದ ವರ್ಷದ ಮಳೆಹಾನಿ ಪರಿಹಾರದ ಹಣ 56 ಕೋಟಿಯಷ್ಟು ಬಾಕಿ ಉಳಿದಿದೆ. ಸರ್ಕಾರ ಬಿಡುಗಡೆ ಮಾಡಿದ ಹಣವನ್ನು ಕಾಮಗಾರಿಗಳಿಗೆ ವಿನಿಯೋಗಿಸಿ ಸದ್ಬಳಕೆ ಮಾಡದೆ ಉಳಿಸಿಕೊಂಡಿರುವುದು ಸರಿಯಲ್ಲ. ಮಳೆಹಾನಿ ಕಾಮಗಾರಿ ಇಲ್ಲದಿದ್ದಲ್ಲಿ ಪ್ರಸ್ತಾವನೆಯಲ್ಲಿರುವ ಕಾಮಗಾರಿಯನ್ನು ರದ್ದುಗೊಳಿಸಬೇಕು, ತಪ್ಪಿದಲ್ಲಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಉಳಿಕೆಯಾಗಿರುವ ಹಣವನ್ನು ಈ ಬಾರಿಯ ಮಳೆಯಿಂದ ಹಾನಿಗೊಳಗಾಗಿರುವ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ಮೇಲೆ ವಿನಿಯೋಗಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿರುವುದಾಗಿ ಸಚಿವ ಕೃಷ್ಣಬೈರೇ ಗೌಡ ಹೇಳಿದರು..NEWSDESK
::: 15 ರಿಂದ 20 ಕೋಟಿ :::
2018 ರಿಂದ ಭೂಕುಸಿತವಾಗುತ್ತಲೇ ಇರುವ ಪ್ರದೇಶಗಳ ಬಗ್ಗೆ ಅಧಿಕಾರಿಗಳು ಪ್ರಸ್ತಾಪಿಸಿದ್ದಾರೆ. ಇಲ್ಲಿ ಪರಿಹಾರೋಪಾಯಗಳನ್ನು ಕೈಗೊಳ್ಳಲು ಭೂವಿಜ್ಞಾನಿಗಳಿಂದ ವರದಿ ಪಡೆಯಬೇಕು. ನಂತರ ಪ್ರಸ್ತಾವನೆ ಸಲ್ಲಿಸಿದರೆ ಕಾಮಗಾರಿಗೆ ಕಂದಾಯ ಇಲಾಖೆಯಿಂದ 15 ರಿಂದ 20 ಕೋಟಿ ರೂ. ನೀಡಲು ಸಿದ್ಧ ಇರುವುದಾಗಿ ಸಚಿವರು ಭರವಸೆ ನೀಡಿದರು..NEWSDESK
ಮಳೆಯಿಂದಾಗುವ ಹಾನಿಗೆ ಬೇಕಾದ ಪರಿಹಾರವನ್ನು ನೀಡಲು ಸರ್ಕಾರ ಸಿದ್ಧವಿದೆ, ಹಣದ ಕೊರತೆಯಿಲ್ಲ. ಆದರೆ ಅಧಿಕಾರಿಗಳು ಯಾವುದೇ ಅನಾಹುತಗಳು ಸಂಭವಿಸದoತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು..NEWSDESK
ಜಿಲ್ಲೆಯಲ್ಲಿ ಎನ್‌ಡಿಆರ್‌ಎಫ್ ತಂಡಗಳು, ಅಗ್ನಿಶಾಮಕ ದಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮಳೆ ಸಂಬoಧಿತ ಕಾರ್ಯದಲ್ಲಿ ನಿರತರಾಗಿದ್ದಾರೆ. ವಿದ್ಯುತ್ ಮಾರ್ಗದ ನಿರ್ವಹಣೆಗೆ ಹೆಚ್ಚಿನ ಸಿಬ್ಬಂದಿಗಳ ಅಗತ್ಯವಿದೆ ಎಂದು ಅಧಿಕಾರಿಗಳು ಮನವಿ ಮಾಡಿದ್ದು, ಹೆಚ್ಚುವರಿ ಮಾನವ ಸಂಪನ್ಮೂಲವನ್ನು ಒದಗಿಸುವುದಾಗಿ ಕೃಷ್ಣಬೈರೇಗೌಡ ತಿಳಿಸಿದರು..NEWSDESK
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಉಪಸ್ಥಿತರಿದ್ದರು..NEWSDESK

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.