ಮಡಿಕೇರಿ ಜು.26 : ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ 2023-24 ನೇ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಟರ್ನರು 13 ಸ್ಥಾನ ಮತ್ತು ಬಿಡಿವಿವಿ 24 ಸ್ಥಾನಗಳು ಖಾಲಿಯಿದ್ದು, ಖಾಲಿ ಉಳಿದಿರುವ ಸ್ಥಾನಗಳನ್ನು ನೇರವಾಗಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆ.31 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮಡಿಕೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.








