ಮಡಿಕೇರಿ ಜು.26 : ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಪ್ ಇಂಡಿಯಾ(ಮಡಿಕೇರಿ ಘಟಕ), ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಕಗ್ಗೋಡ್ಲು ಕಾವೇರಿ ಯುವ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಆ.12 ರಂದು ಮಡಿಕೇರಿ ತಾಲ್ಲೂಕು ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ.ದೇವಯ್ಯ ಅವರ ಗದ್ದೆಯಲ್ಲಿ 2023-24 ನೇ ಸಾಲಿನ ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆ ನಡೆಯಲಿದೆ.
ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಯ ಉದ್ಘಾಟನಾ ಸಮಾರಂಭವು ಆಗಸ್ಟ್, 12 ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಪಿ.ಪಿ.ಸುಕುಮಾರ್, ಅಧ್ಯಕ್ಷರು ಕೊಡಗು ಜಿಲ್ಲಾ ಯುವ ಒಕ್ಕೂಟ ಮಡಿಕೇರಿ 9481213920, ಬಾಳಾಡಿ ದಿಲೀಪ್ ಕುಮಾರ್, ಅಧ್ಯಕ್ಷರು, ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ 8618568173, ಕುಂಜಿಲನ ಎಂ.ಮೋಹನ್, ಖಜಾಂಜಿ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ 9480646382, ನವೀನ್ ದೇರಳ, ಸದಸ್ಯರು, ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ 9449952008 ಹಾಗೂ ಎ.ಆರ್.ನೇತ್ರಾವತಿ, ಕಾರ್ಯದರ್ಶಿ, ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ 9449679460 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.









