ಮಡಿಕೇರಿ ಜು.26 : ಸೋಮವಾರಪೇಟೆಯ ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾನಗಲ್ಲು ಬಾಣೆ ಯಲ್ಲಿ ಮಳೆಹಾನಿ ಸಂಭವಿಸಿದ ಸ್ಥಳಕ್ಕೆ ಶಾಸಕ ಡಾ.ಮಂತರ್ ಗೌಡ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.
ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಪರಿಶೀಲಿಸಿ, ಜಿಲ್ಲೆಯಲ್ಲಿ ಇನ್ನೂ ಮಳೆಯಾಗುವುದರಿಂದ ಹೆಚ್ಚಿನ ಮುನ್ನೆಚ್ಚರ ವಹಿಸಬೇಕಿದೆ ಎಂದು ಶಾಸಕರು ಹೇಳಿದರು.









