ಸೋಮವಾರಪೇಟೆ ಜು.26 : ಸಣ್ಣ ಕಾಫಿ ಬೆಳೆಗಾರರ 10ಹೆಚ್.ಪಿ.ವರೆಗಿನ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್ ನೀಡಬೇಕು. ಬಾಕಿ ವಿದ್ಯುತ್ ಬಿಲ್ ಮನ್ನಾ ಮಾಡದ್ದಿದ್ದರೆ ಹೋರಾಟಕ್ಕೆ ಕರೆ ನೀಡಲಾಗುವುದು ಎಂದು ರಾಜ್ಯ ರೈತ ಸಂಘದ ಸೋಮವಾರಪೇಟೆ ತಾಲ್ಲೂಕು ಘಟಕ ಎಚ್ಚರಿಸಿದೆ.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಂ.ದಿನೇಶ್ ಪತ್ರಿಕಾಗೋಷ್ಠಿಯಲ್ಲಿ, ಪ್ರತಿವರ್ಷ ಅಕಾಲಿಕ ಮಳೆ, ಫಸಲು ಹಾನಿಯಿಂದ ನಷ್ಟದಲ್ಲಿರುವ ಸಣ್ಣ ಕಾಫಿ ಬೆಳೆಗಾರರ 10ಎಚ್.ಪಿ.ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್ ಮತ್ತು ವಿದ್ಯುತ್ ಬಾಕಿ ಬಿಲ್ ಮನ್ನಾ ಬೇಡಿಕೆಯಿಟ್ಟು ಹೋರಾಟ ಮಾಡುತ್ತಿದ್ದೇವೆ. ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕೆಲವು ನಿಂಬಂಧನೆ ಹಾಕಿ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಹೇಳಿತ್ತು. ಆದರೆ ಇದುವರಗೆ ಯವುದೇ ಕ್ರಮ ಆಗಿಲ್ಲ. ಇಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿವೇಶನದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿದರು.
ಜಿಲ್ಲೆಯ ಶಾಸಕರಿಬ್ಬರೂ ಮೌನಕ್ಕೆ ಶರಣಾಗಿದ್ದಾರೆ. ಚಿಕ್ಕಮಗಳೂರು, ಹಾಸನ ಜಿಲ್ಲೆಯ ಶಾಸಕರನ್ನು ಸೇರಿಸಿಕೊಂಡು ಸರ್ಕಾರದ ಮೇಲೆ ಒತ್ತಡ ತಂದು, ಉಚಿತ ವಿದ್ಯುತ್‍ಗೆ ಕಾನೂನಾತ್ಮಕ ಮಂಜೂರಾತಿ ಪಡೆಯಬೇಕು. ವಿರಾಜಪೇಟೆ ಶಾಸಕರು ಉಚಿತ ವಿದ್ಯುತ್ ಬಗ್ಗೆ ತಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ. ಈ ಅಧಿವೇಶನದಲ್ಲೇ ಉಚಿತ ವಿದ್ಯುತ್ ಮತ್ತು ವಿದ್ಯುತ್‍ಬಿಲ್ ಬಾಕಿ ಮನ್ನಾದ ಬಗ್ಗೆ ತೀರ್ಮಾನವಾಗಬೇಕು. ತಪ್ಪಿದಲ್ಲಿ ರೈತ ಸಂಘದಿಂದ ಉಗ್ರಹೋರಾಟ ರೂಪಿಸಲಿದೆ ಎಂದು ಎಚ್ಚರಿಸಿದರು.
ತಾಲ್ಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಕಾಫಿ, ಕಾಳುಮೆಣಸು ಬೆಳೆಗೆ ದೊಡ್ಡಮಟ್ಟದ ಹಾನಿಯಾಗಿದ್ದು, ತಕ್ಷಣವೇ ಅಧಿಕಾರಿಗಳು ಮಳೆಹಾನಿ ಸಮೀಕ್ಷೆ ನಡೆಸಿ, ಮಳೆಹಾನಿ ಪರಿಹಾರ ರೈತರಿಗೆ ಸಿಗುವಂತಾಗಬೇಕು ಎಂದರು.
ರೈತ ಸಂಘದ ಉಪಾಧ್ಯಕ್ಷ ಜಿ.ಎಂ.ಹೂವಯ್ಯ ಮಾತನಾಡಿ, ಕಾಫಿಯನ್ನು ಕೃಷಿಬೆಳೆಯಾಗಿ ಪರಿವರ್ತನೆಯಾದಾಗ ಮಾತ್ರ ಕಾಫಿ ಬೆಳೆಯುವ ರೈತರು ಸಂಕಷ್ಟದಿಂದ ಪಾರಾಗಬಹುದು. ವಾಣಿಜ್ಯ ಬೆಳೆ ಎಂಬುದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ತೆರಿಗೆ ಸಂಗ್ರಹಿಸಲು ಸಹಕಾರಿಯಾಗಿದೆ ಎಂದರು.
ಕಾಫಿ ಬೆಳೆಗಾರರು ಉಗ್ರ ಹೋರಾಟ ಮಾಡದ ಕಾರಣ, ಈಗ ಎಲ್ಲವನ್ನು ಕಳೆದುಕೊಳ್ಳುವಂತ ದುಸ್ಥಿತಿಗೆ ಬಂದಿದ್ದೇವೆ. ಸಣ್ಣ ಕಾಫಿ ಬೆಳೆಗಾರರು ದುರ್ಬಲರು ಎಂದು ಸರ್ಕಾರ ಭಾವಿಸಿರುವುದರಿಂದ ಅನಾಥರಾಗಬೇಕಾಗಿದೆ ಎಂದರು.
ಕಂದಾಯ, ಕೃಷಿ, ತೋಟಗಾರಿಕಾ, ಕಾಫಿ ಮಂಡಳಿ ಜಂಟಿ ಸರ್ವೇ ಪ್ರಾರಂಭಿಸಲು ಸರ್ಕಾರ ಆದೇಶ ನೀಡಬೇಕು ಎಂದು ಒತ್ತಾಯಿಸಿದರು.
ತಾಲ್ಲೂಕಿನ ಬಹುತೇಕ ಗ್ರಾಮಗಳು ಕತ್ತಲೆಯಲ್ಲಿವೆ. 10 ದಿನಗಳಿಂದ ವಿದ್ಯುತ್ ಇಲ್ಲದಂತಾಗಿದೆ. ಮೊಬೈಲ್, ಲ್ಯಾಪ್‍ಟ್ಯಾಪ್ ಚಾರ್ಜ್ ಆಗದೆ ವರ್ಕ್ ಫ್ರಮ್ ಹೋಂ ಉದ್ಯೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಬ್ಬಂದಿಗಳಿಲ್ಲ ಎಂದು ಸೆಸ್ಕ್ ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ. ಮುಂಗಾರಿಗೆ ಸಿದ್ದತೆಯನ್ನು ಏಕೆ ಮಾಡಿಕೊಂಡಿಲ್ಲ ಎಂದು ಪ್ರಶ್ನಿಸಿದ ಅವರು, ಹೊರ ಜಿಲ್ಲೆಗಳಿಂದ ಸಿಬ್ಬಂದಿಗಳನ್ನು ಕರೆಸಿಕೊಂಡು ಒದೆರಡು ದಿನಗಳಲ್ಲಿ ವಿದ್ಯುತ್ ಸಂಪರ್ಕ ಕೊಡಿಸಬೇಕು ಎಂದು ಹೇಳಿದರು.
ಸಂಘದ ಸಂಚಾಲಕ ಲಕ್ಷ್ಮಣ್ ಮಾತನಾಡಿ, ಕಾಜೂರು ಅರಣ್ಯ ವ್ಯಾಪ್ತಿಯಲ್ಲಿ ಎಲಿಫೆಂಟ್ ಕಾರಿಡಾರ್ ಮುಚ್ಚಿ ರೈಲ್ಚೆ ಬ್ಯಾರಿಕೇಡ್ ಮಾಡಿರುವುದರಿಂದ ಕಾಡಾನೆಗಳು ಗ್ರಾಮಗಳಿಗೆ ನುಗ್ಗುತ್ತಿವೆ. ಮೂರು ವರ್ಷವಾದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಇನ್ನು ಒಂದು ಕಿ.ಮೀ. ಕಾಮಗಾರಿ ಬಾಕಿಯಿದೆ. ಆ ಭಾಗದಲ್ಲಿ ಕಾಡಾನೆ ದಾಟಿ ಕೃಷಿ ಫಸಲನ್ನು ಹಾಳು ಮಾಡುತ್ತಿವೆ ಎಂದು ದೂರಿದರು.
ಕಂಪನಿ ಕಾಫಿ ತೋಟವೊಂದರಲ್ಲಿ ಕಾಡಾನೆ ಕಾರಿಡಾರ್ ಇದೆ. ಅಲ್ಲಿರುವ ಕೆರೆಗಳಲ್ಲಿ ನೀರು ಕುಡಿದು ಕಾಡಾನೆಗಳು ವಾಪಾಸ್ಸು ಅರಣ್ಯಕ್ಕೆ ತೆರಳುತ್ತಿದ್ದವು. ಈಗ ಅರಣ್ಯ ಇಲಾಖೆಯವರು ದಾರಿಯನ್ನು ಮುಚ್ಚಿದ್ದಾರೆ. ಈಗ ಕೃಷಿಕರಿಗೆ ಸಮಸ್ಯೆ ಎದುರಾಗಿದೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಎ.ಆರ್.ಕುಶಾಲಪ್ಪ, ಮಚ್ಚಂಡ ಅಶೋಕ್ ಇದ್ದರು.
Breaking News
- *ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ*
- *ಕಬ್ಬಚ್ಚಿರ ರಶ್ಮಿ ಕಾರ್ಯಪ್ಪಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ*
- *ಬೋಯಿಕೆರಿ ಅಂಗನವಾಡಿಯಲ್ಲಿ ನಿವೃತ್ತ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ : ಸಂಸ್ಕಾರವಂತ ಸಮಾಜ ನಿರ್ಮಾಣದ ರೂವಾರಿಗಳು ಅಂಗನವಾಡಿ ತಾಯಂದಿರು : ತೆನ್ನಿರ ಮೈನಾ ಶ್ಲಾಘನೆ*
- *ವ್ಯಾoಡಮ್ ಎಂಟರ್ಪ್ರೈಸಸ್ ನ ವಾರ್ಷಿಕೋತ್ಸವ : ನ.24 ರಂದು ಲಕ್ಕಿ ಡ್ರಾ ಸಮಾರಂಭ*
- *ಮಾದರಿ ವಿಶೇಷಚೇತನರ ಸ್ವ ಸಹಾಯ ಸಂಘ ಹಾಗೂ ಮಾದರಿ ಗ್ರಾಮ/ ಪಟ್ಟಣ ಪಂಚಾಯತ್ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಹೊಸ್ಕೇರಿಬೆಟ್ಟ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ*
- *ಕೊಡಗು : ಸಹಕಾರ ಸಂಘಗಳ ಸುಸ್ಥಿರತೆಗೆ ಎಲ್ಲರೂ ಶ್ರಮಿಸಿ : ಕೆ.ಎನ್.ರಾಜಣ್ಣ ಸಲಹೆ*
- *ಮಡಿಕೇರಿಯಲ್ಲಿ ಪೌರಕಾರ್ಮಿಕರ ದಿನಾಚರಣೆ : ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ : ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*