ಮಡಿಕೇರಿ ಜು.26 : ಗಾಳಿಬೀಡು ಗ್ರಾ.ಪಂ ಗೆ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಭೇಟಿ ನೀಡಿದರು.
ಗ್ರಾ.ಪಂ ಅಧಿಕಾರಿಗಳೊಂದಿಗೆ ಹಾಗೂ ಗ್ರಾಮಸ್ಥರೊಂದಿಗೆ ಸಮಾಲೋಚನೆ ಹಾಗೂ ತುರ್ತು ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು.
ನಂತರ ವಣಚಲು ಗ್ರಾಮಕ್ಕೆ ಭೇಟಿ ನೀಡಿ ಬರೆ ಕುಸಿತ ಉಂಟಾದ ಸ್ಥಳ ವನ್ನು ಪರಿಶೀಲಿಸಿದರು. ಇದೇ ಸಂದರ್ಭ ಗಾಳಿಬೀಡು ಮುಖ್ಯ ರಸ್ತೆಯನ್ನು ದುರಸ್ತಿ ಪಡಿಸಿ ರಸ್ತೆ ಅಗಲೀಕರಣ ಮಾಡಿಸುದಾಗಿ ಸಚಿವರು ಭರವಸೆ ನೀಡಿದರು.
ಶಾಸಕ ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜಾ, ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.