ಮಡಿಕೇರಿ ಜು.26 : ಕರ್ನಾಟಕ ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ ನೀಡುವ “ಗೃಹಲಕ್ಷ್ಮಿ” ಯೋಜನೆ ಅನುಷ್ಠಾನದಲ್ಲಿದ್ದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರ, ಎಲ್ಲಾ ಗ್ರಾಮ ವ್ಯಾಪ್ತಿಯಲ್ಲಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಗೆ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಮಂಜೂರಾತಿ ಪತ್ರ ಪಡೆಯಬಹುದಾಗಿದೆ.
ಮಡಿಕೇರಿ ನಗರಸಭಾ ವ್ಯಾಪ್ತಿಗೆ ಸಂಬಂಧಿಸಿದಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಹದೇವಪೇಟೆ, ಬೂಸ್ಟರ್ ಪಂಪ್ ಹೌಸ್ (ಮೈತ್ರಿ ಹಾಲ್ ಹತ್ತಿರ), ಡಾ.ಅಂಬೇಡ್ಕರ್ ಭವನ, ಸುದರ್ಶನ ಸರ್ಕಲ್, ಅಂಬೇಡ್ಕರ್ ಭವನ, ಆಜಾದ್‍ನಗರ, ಮಡಿಕೇರಿ ಇಲ್ಲಿ ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಾರ್ಯಾಲಯ ಮತ್ತು ವಿರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸಂಬಂಧಪಟ್ಟಂತೆ ವಿರಾಜಪೇಟೆ ಪಟ್ಟಣ ಪಂಚಾಯಿತಿ ಕಾರ್ಯಾಲಯಗಳಲ್ಲಿ ಸೇವಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದೆ.
ಕುಶಾಲನಗರ ಪುರಸಭೆ ವ್ಯಾಪ್ತಿಗೆ ಸಂಬಂಧಿಸಿದಂತೆ ಕುಶಾಲನಗರ ಪುರಸಭಾ ಕಾರ್ಯಾಲಯ, ಗಣಪತಿ ಪೆಂಡಾಲ್, 4ನೇ ಬ್ಲಾಕ್, ಕರಿಯಪ್ಪ ಬಡಾವಣೆ ಮತ್ತು ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಕಾರ್ಯಾಲಯಗಳಲ್ಲಿ ಸೇವಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಪ್ರಯೋಜನ ಪಡೆದುಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*