ಮಡಿಕೇರಿ ಜು.26 : ಪ್ರಸಕ್ತ(2023-24) ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾಗೊಳಿಸಲು ಕೊಡಗು ಜಿಲ್ಲೆಯಲ್ಲಿ ಕಾಳುಮೆಣಸು ಹಾಗೂ ಅಡಿಕೆ ಬೆಳೆಗೆ ವಿಮಾ ಘಟಕ ಅಧಿಸೂಚಿಸಲಾಗಿದೆ.
ಹವಾಮಾನ ಆಧಾರಿತ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಮತ್ತಿತರ ಮಾಹಿತಿಯನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ. 2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಕಾಳುಮೆಣಸು ಬೆಳೆಗೆ ಒಟ್ಟು ರೂ. 47 ಸಾವಿರ ಹಾಗೂ ಅಡಿಕೆ ಬೆಳೆಗೆ ರೂ. 128000 ಆಗಿರುತ್ತದೆ. ವಿಮಾ ಕಂಪನಿಗೆ ಒಟ್ಟು ವಿಮಾ ಮೊತ್ತಕ್ಕೆ ರೈತರು ಕಾಳುಮೆಣಸು ಬೆಳೆಗೆ ಶೇ. 5ರ ವಿಮಾ ಮೊತ್ತ ರೂ. 2350 ಹಾಗೂ ಅಡಿಕೆ ಬೆಳೆಗೆ ರೂ. 6400 ಪ್ರತಿ ಹೆಕ್ಟೇರ್ ಪಾವತಿಸಬೇಕಾಗಿರುತ್ತದೆ. ವಿಮಾ ನೋಂದಣಿಗೆ ಜುಲೈ, 31 ಕೊನೆಯ ದಿನವಾಗಿದೆ.
ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ರೈತರು ವಿಮಾ ಮೊತ್ತವು ಪಾವತಿಸಬೇಕಾದ ವಿಮಾ ಕಂತಿನ ಮೊತ್ತವು ಒಂದೇ ಆಗಿರುತ್ತದೆ. ಜಿಲ್ಲೆಯಲ್ಲಿ ಬೆಳೆ ಸಾಲ ಪಡೆದ ರೈತರು ಹಾಗೂ ಸಾಲ ಪಡೆಯದ ರೈತರು ವಿಮೆ ಯೋಜನೆಯಡಿ ನೊಂದಣಿ ಮಾಡಿಕೊಳ್ಳಬಹುದಾಗಿದೆ. ವಿಮೆ ಮಾಡಿಸಲು ಇಚ್ಚಿಸುವ ರೈತರು ನಿಗಧಿತ ಅರ್ಜಿಯೊಂದಿಗೆ ಪಹಣಿ ಪತ್ರ, ಬ್ಯಾಂಕ್ ಖಾತೆ ಪಾಸ್ ಪುಸ್ತಕ, ಆಧಾರ್ ಕಾರ್ಡ್ ನಕಲು ಪ್ರತಿಗಳನ್ನು ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಲಗತ್ತಿಸಿ ತಮ್ಮ ಹತ್ತಿರದ ಬ್ಯಾಂಕ್‍ಗಳಲ್ಲಿ ಅಥವಾ ಬೆಳೆ ಸಾಲ ಪಡೆಯದ ರೈತರು ಮಾತ್ರ ಗ್ರಾಮ ಪಂಚಾಯತ್ ಮಟ್ಟದಲ್ಲಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿಯೂ ಸಹ ವಿಮೆ ಯೋಜನೆಯಡಿ ಹೆಸರು ನೊಂದಾಯಿಸಿಕೊಳ್ಳಬಹುದು.
ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಅನುಷ್ಠಾನಗೊಳಿಸಲು ಕೊಡಗು ಜಿಲ್ಲೆಗೆ ಕ್ಷೇಮಾ ಜನರಲ್ ಇನ್ಸೂರೆನ್ಸ್ ವಿಮಾ ಸಂಸ್ಥೆಯು ಹಂಚಿಕೆಯಾಗಿರುತ್ತದೆ.(ಸಹಾಯವಾಣಿ ಸಂಖ್ಯೆ 080-26564535, 080-26564536, 080-26564537)
ಹೆಚ್ಚಿನ ಮಾಹಿತಿಗೆ ಸಮೀಪದ ಬ್ಯಾಂಕ್ ಶಾಖೆ, ಕ್ಷೇಮಾ ಜನರಲ್ ಇನ್ಸೂರೆನ್ಸ್ ಕಂಪನಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಮಡಿಕೇರಿ ಮತ್ತು ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪ್ರಮೋದ್ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*