ಸೋಮವಾರಪೇಟೆ ಜು.25 : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸ್ವಸಹಾಯ ಸಂಘಗಳ ಗುಂಪುಗಳಿಗೆ ಮತ್ತು ಸಾರ್ವಜನಿಕರಿಗೆ ಪ್ಲಾಸ್ಟಿಕ್ ಮುಕ್ತ ಅಭಿಯಾನದ ಬಗೆಗಿನ ಜಾಗೃತಿ ಸಭೆ ಪಟ್ಟಣ ಪಂಚಾಯಿತಿಯಲ್ಲಿ ನಡೆಯಿತು.
ಮುಖ್ಯಾಧಿಕಾರಿ ನಾಚಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈಗಾಗಲೇ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗಿದೆ. ಆದರೂ ಅಂಗಡಿ, ಮುಂಗಟ್ಟುಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಅನೇಕ ಕಡೆ ರೈಡ್ ಮಾಡಿ ದಂಡ ವಿಧಿಸಲಾಗುತ್ತಿದೆ.
ಸಾರ್ವಜನಿಕರು ಕೂಡ ಪ್ಲಾಸ್ಟಿಕ್ ಖರೀದಿಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ವಸ್ತುಗಳನ್ನು ಖರೀದಿಸುವ ಸಂದರ್ಭ ಜೊತೆಯಲ್ಲಿ ಬಟ್ಟೆಯ ಬ್ಯಾಗ್‍ಗಳನ್ನು ತೆಗೆದುಕೊಂಡು ಹೋಗಬೇಕು. ಪ್ಲಾಸ್ಟಿಕ್‍ನಿಂದ ಪರಿಸರದ ಮೇಲೆ ದೊಡ್ಡಮಟ್ಟದ ದುಷ್ಪರಿಣಾಮ ಬೀರುತ್ತಿದ್ದು, ಇದನ್ನು ನಾವೆಲ್ಲರೂ ಜವಾಬ್ದಾರಿಯಿಂದ ತಡೆಯಬೇಕಾಗಿದೆ ಎಂದರು.
ವೇದಿಕೆಯಲ್ಲಿ ಅರೋಗ್ಯ ನಿರೀಕ್ಷಕ ಜಾಸಿಮ್‍ಖಾನ್, ಸದಸ್ಯರಾದ ಶೀಲಾ ಡಿಸೋಜ, ಮೃತ್ಯುಂಜಯ, ಬಿ.ಆರ್.ಮಹೇಶ್ ಇದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*