ಮಡಿಕೇರಿ ಜು. 27 : ಮಕ್ಕಳು ಹದಿಹರೆಯದ ವಯಸ್ಸಿನಲ್ಲಿ ಮನಸ್ಸಿನ ಸ್ವ ನಿಯಂತ್ರಣದೊಂದಿಗೆ ಕಠಿಣ ಪರಿಶ್ರಮದ ಮೂಲಕ ಗುರಿ ತಲುಪಬೇಕೆಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಕರೆ ನೀಡಿದ್ದಾರೆ.
ನ್ಬಹುದೆಂದು ಕಿವಿ ಮಾತು ಹೇಳಿದರು.ಯುವ ಜನಾಂಗ ಮಾದಕ ವಸ್ತುಗಳ ಸೇವನೆ ಯಿಂದ ಮುಕ್ತ ರಾಗಿ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದರು.
ಮಾದಾಪುರದ ಶ್ರೀಮತಿ ಡಿ ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಕೆ.ರಾಮರಾಜನ್ ಯುವ ಜನಾಂಗ ಮಾದಕ ವಸ್ತುಗಳ ಸೇವನೆ ಯಿಂದ ಮುಕ್ತ ರಾಗಿ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ಕರೆ ನೀಡಿದರಲ್ಲದೇ, ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಎದುರಿಸ ಬಹುದಾದ ಸಮಸ್ಯೆ ಗಳು ಹಾಗೂ ಅವುಗಳನ್ನು ಹೇಗೆ ಮೆಟ್ಟಿ ನಿಂತು ಮುಂದೆ ಬರಬಹುದು ಎಂಬುದನ್ನು ತನ್ನ ಸ್ವಂತ ಅನುಭವದ ಮೂಲಕ ತಿಳಿಸಿದರು.
ವಿದ್ಯಾರ್ಥಿಗೆ ಭವಿಷ್ಯದ ಗುರಿ ಉದ್ದೇಶ ಸ್ಪಷ್ಟ ವಾಗಿದ್ದು ನಿರಂತರ ಪ್ರಯತ್ನದಿಂದ ಯಶಸ್ಸು ಸಾಧಿಸಬಹುದು ಎನ್ನುವುದಕ್ಕೆ ತಮ್ಮ ಜೀವನದ ಹಾಗೂ ಅವರ ಸಹಪಾಠಿಗಳ ಸಾಧನೆಯ ಜ್ವಲಂತ ನಿದರ್ಶನದ ಮೂಲಕ ಮಕ್ಕಳನ್ನು ಪ್ರೋತ್ಸಾಹಿಸಿದ ಪೊಲೀಸ್ ವರಿಷ್ಟಾಧಿಕಾರಿ, ಇದೇ ಸಂದಭ೯ ಪ್ರಶ್ನೋತ್ತರಗಳ ಮೂಲಕ ಸಂವಾದದಲ್ಲಿ ಪಾಲ್ಗೊಂಡು ಅನೇಕ ಉಪಯುಕ್ತ ಮಾಹಿತಿಗಳನ್ನು ವಿದ್ಯಾಥಿ೯ ವೖಂದಕ್ಕೆ ನೀಡಿದರು. ಸರಿಯಾದ ಉತ್ತರ ನೀಡಿದ ಮಕ್ಕಳಿಗೆ ಚಾಕಲೇಟ್ ನೀಡಿ ಅತ್ಯುತ್ಸಾಹದಿಂದ ಭಾಗಿಯಾಗಿ ಮನ ಗೆದ್ದರು.
ಶ್ರೀಮತಿ ಡಿ.ಚೆನ್ನಮ್ಮ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಕನ೯ಲ್ ಬಿ ಜಿ ವಿ ಕುಮಾರ್ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ತಮ್ಮ ಜವಾಬ್ದಾರಿ ಯರಿತು ಕಾರ್ಯ ನಿರ್ವಹಿಸಬೇಕೆಂದು ತಿಳಿಸಿದರು. ಪ್ರಾಂಶುಪಾಲರಾದ ಸಿ ಜಿ ಮಂದಪ್ಪ ಸ್ವಾಗತಿಸಿ, ಉಪನ್ಯಾಸಕಿ ಪ್ರಮೀಳ ನಿರೂಪಿಸಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪಾಲಾಕ್ಷ ಪ್ರಾಸ್ತಾವಿಕ ಮಾತನಾಡಿದರು. ವೇದಿಕೆಯಲ್ಲಿ ಸೋಮವಾರಪೇಟೆ ವೃತ್ತ ನೀರಿಕ್ಷಕರಾದ ಮಹೇಶ್ ಸುಂಟಿಕೊಪ್ಪ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀಧರ್ ಸಂಸ್ಥೆಯ ಮುಖ್ಯ ಶಿಕ್ಷಕಿ ರೇವತಿ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.