ಮಡಿಕೇರಿ ಜು.27 : ಪ್ರಸಕ್ತ (2023-24) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ಸಾಮಾನ್ಯ ಪದವಿ ಕೋರ್ಸಿನ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆ ದಿನಾಂಕವಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://.shp.karnataka.gov.in ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ:- ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ. ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ರೂ.1 ಲಕ್ಷ ಆಗಿದೆ. ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://.bcwd.karnataka.gov.in ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಈ ಇ-ಮೇಲ್ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಡಿಕೇರಿ ತಾಲ್ಲೂಕು ಮೊ.ಸಂಖ್ಯೆ: 8762476790, ವಿರಾಜಪೇಟೆ ತಾಲ್ಲೂಕು ಮೊ.ಸಂಖ್ಯೆ: 9844531040, ಸೋಮವಾರಪೇಟೆ ತಾಲ್ಲೂಕು ಮೊ.ಸಂಖ್ಯೆ: 9481772143 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.









