ಮಡಿಕೇರಿ ಜು.27 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಮೀಪದ ಅಂಗನವಾಡಿ ಕೇಂದ್ರದ ಬಳಿ ಬೃಹತ್ ಮರವೊಂದು ಅಪಾಯಕ್ಕೆ ಆಹ್ವಾನ ನೀಡುವಂತಿದೆ.
ಅಂಗನವಾಡಿ ಕೇಂದ್ರದ ತಡೆಗೋಡೆ ಪಕ್ಕದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಗೆ ಸಂಬಂಧಿಸಿದ ವಸತಿ ಗೃಹದ ಬಳಿ ಬೃಹದಾಕಾರದ ಮರಗಳಿದ್ದು, ಇದರ ಕೊಂಬೆಗಳು ಅಂಗನವಾಡಿ ಕೇಂದ್ರದ ಮೇಲೆ ಬಾಗಿ ನಿಂತಿದೆ. ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಅರಣ್ಯ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಇದುವರೆಗೂ ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದು ವಿಪರ್ಯಾಸ.
ಈ ಅಂಗನವಾಡಿ ಕೇಂದ್ರಕ್ಕೆ ನಿತ್ಯವೂ 15 ಮಕ್ಕಳು ಹಾಜರಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಅಪಾಯದಂಚಿನಲ್ಲಿರುವ ಮರಗಳ ಕೊಂಬೆಗಳನ್ನು ತೆರವುಗೊಳಿಸುವಂತೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಪೋಷಕರು ಒತ್ತಾಯಿಸಿದ್ದಾರೆ.
ವರದಿ : ದಿನು ಬಾರನ-ಮದೆ








