ಮಡಿಕೇರಿ ಜು.27 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಮೀಪದ ಅಂಗನವಾಡಿ ಕೇಂದ್ರದ ಬಳಿ ಬೃಹತ್ ಮರಗಳು ಅಪಾಯಕ್ಕೆ ಆಹ್ವಾನ ನೀಡುತ್ತಿವೆ.
ಅಂಗನವಾಡಿ ಕೇಂದ್ರದ ತಡೆಗೋಡೆ ಬಳಿ ಬೃಹದಾಕಾರದ ಮರಗಳಿದ್ದು, ಇದರ ಕೊಂಬೆಗಳು ಅಂಗನವಾಡಿ ಕೇಂದ್ರದ ಮೇಲೆ ಬಾಗಿ ನಿಂತಿವೆ. ಅಪಾಯದ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸುವಂತೆ ಬಹಳ ಹಿಂದೆಯೇ ಅರಣ್ಯ ಇಲಾಖೆ ಮತ್ತು ಸಂಬಂಧಿಸಿದವರಿಗೆ ಮನವಿ ಸಲ್ಲಿಸಿದರೂ ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಇಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಪ್ರತಿದಿನ 15 ಮಕ್ಕಳು ಹಾಜರಾಗುತ್ತಿದ್ದು, ಗಾಳಿ, ಮಳೆಯಿಂದ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಆತಂಕಗೊಂಡಿದ್ದಾರೆ. ಅರಣ್ಯ ಇಲಾಖೆ ತಕ್ಷಣ ಮರ ತೆರವಿಗೆ ಕ್ರಮ ಕೈಗೊಳ್ಳಬೇಕೆಂದು ಮಕ್ಕಳ ಪೋಷಕರು ಒತ್ತಾಯಿಸಿದ್ದಾರೆ. (ವರದಿ : ದಿನು ಬಾರನ-ಮದೆ)









