ಮಡಿಕೇರಿ ಜು.28 : ಕೊಡಗು ಗೌಡ ಸಮಾಜ, ಮಡಿಕೇರಿ ಗೌಡ ಸಮಾಜ ಮತ್ತು ಜಿಲ್ಲೆಯ ಎಲ್ಲಾ ಗೌಡ ಸಮಾಜಗಳ ಸಂಘಟನೆಗಳ ಸಹಯೋಗದಲ್ಲಿ ಶಾಸಕದ್ವಯರನ್ನು ಸನ್ಮಾನಿಸಲಾಯಿತು.
ನಗರದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ನಡೆದ ಅಭಿನಂದನಾ ಸಮಾಂಭದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್.ಸೋಮಣ್ಣ ಹಾಗೂ ಎಲ್ಲಾ ಗೌಡ ಸಮಾಜಗಳ ಮತ್ತು ಸಂಘಟನೆಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಜನಾಂಗ ಬಾಂಧವರು ಹಾಜರಿದ್ದರು.










