ಮಡಿಕೇರಿ ಜು.10 : ಕೊಡಗಿನಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 23.65 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 20.18 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1521.47 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1900.41 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 38.52 ಮಿ.ಮೀ. ಕಳೆದ ವರ್ಷ ಇದೇ ದಿನ 39.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2229.72 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2679.05 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.41 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6.57 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1124.09 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1492.43 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 22.03 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 14.47 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1210.61 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1529.76 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:- ಮಡಿಕೇರಿ ಕಸಬಾ 43.80, ನಾಪೋಕ್ಲು 10.80, ಸಂಪಾಜೆ 76.50, ಭಾಗಮಂಡಲ 23, ವಿರಾಜಪೇಟೆ ಕಸಬಾ 9.80, ಹುದಿಕೇರಿ 15.70, ಶ್ರೀಮಂಗಲ 14, ಪೊನ್ನಂಪೇಟೆ 6, ಅಮ್ಮತ್ತಿ 12, ಬಾಳೆಲೆ 5, ಸೋಮವಾರಪೇಟೆ ಕಸಬಾ 33, ಶನಿವಾರಸಂತೆ 10, ಶಾಂತಳ್ಳಿ 57, ಕೊಡ್ಲಿಪೇಟೆ 4.80, ಕುಶಾಲನಗರ 2.40, ಸುಂಟಿಕೊಪ್ಪ 25 ಮಿ.ಮೀ.ಮಳೆಯಾಗಿದೆ.









