ಕುಶಾಲನಗರ, ಜು.28 : ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಮುಂಜಾಗ್ರತೆ ವಹಿಸುವ ಮೂಲಕ ಉತ್ತಮ ಆರೋಗ್ಯ ರಕ್ಷಣೆಗೆ ಸೂಕ್ತ ಕ್ರಮ ವಹಿಸಬೇಕು ಎಂದು
ಎಂದು ಜಿಲ್ಲಾ ರೋಗವಾಹಕ ಆಶ್ರಿತಾ ರೋಗಗಳ ನಿಯಂತ್ರಣಾಧಿಕಾರಿ ಡಾ|ಬಿ.ಎಲ್. ಶ್ರೀನಿವಾಸ್
ಹೇಳಿದರು.
ಕುಶಾಲನಗರ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಶಾಲನಗರ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ, ತಾಲ್ಲೂಕು ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ತಾಲ್ಲೂಕಿನ ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ರಾಷ್ಟ್ರೀಯ ಮಲೇರಿಯಾ ಮಾಸಾಚರಣೆ : 2022 ರ ಅಂಗವಾಗಿ ಡೆಂಗ್ಯೂ, ಮಲೇರಿಯಾ, ಚಿಕುನ್ ಗುನ್ಯ ಇನ್ನಿತರ ಸಾಂಕ್ರಾಮಿಕ ರೋಗಗಳ ಕುರಿತಂತೆ “ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣದಲ್ಲಿ ಸಹಭಾಗಿತ್ವ”ದ ಕುರಿತು ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಒಂದು ದಿನದ ಕಾರ್ಯಾಗಾರದ
ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಹಾಗೂ ತಡೆಗಟ್ಟುವ ಕುರಿತು ಮಾಹಿತಿ ನೀಡಿದ ಅವರು, ಸಾಂಕ್ರಾಮಿಕ ರೋಗಗಳು ಹರಡದಂತೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಸಾಂಕ್ರಾಮಿಕ ರೋಗ ತಡೆಗೆ ಮುಂಜಾಗ್ರತೆಯೇ ಮದ್ದು ಎಂದರು.
“ಶೂನ್ಯ ಮಲೇರಿಯಾ ಗುರಿಯನ್ನು ತಲುಪೋಣ” ಎಂಬ ಘೋಷವಾಕ್ಯದೊಂದಿಗೆ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಸಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು, ಮಲೇರಿಯಾ ನಿವಾರಣೆಗೆ ಮುನ್ನೆಚ್ಚರಿಕೆ ಹಾಗೂ ನಿಯಂತ್ರಣ ವಿಧಾನಗಳೇ ನಮ್ಮ ಅಸ್ತ್ರವಾಗಬೇಕು ಡಾ.ಶ್ರೀನಿವಾಸ್ ಹೇಳಿದರು.
ಸಾಂಕ್ರಾಮಿಕ ರೋಗಗಳ ಹರಡುವಿಕೆ, ಸೊಳ್ಳೆಗಳ ಉತ್ಪತ್ತಿ ಮತ್ತು ಅವುಗಳ ನಿರ್ಮೂಲನೆ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಜತೆಗೆ ನಿಯಂತ್ರಣ ಕ್ರಮ ಕೈಗೊಳ್ಳಬೇಕು ಎಂದು ಡಾ ಶ್ರೀನಿವಾಸ್ ಹೇಳಿದರು.
ಸೊಳ್ಳೆಗಳು ಉತ್ಪತ್ತಿಯಾಗುವ ಆಶ್ರಿತ ತಾಣಗಳನ್ನು ನಾಶಪಡಿಸಬೇಕು.
ಸೊಳ್ಳೆಗಳಿಂದ ಹರಡುವ ಡೆಂಗಿ, ಮಲೇರಿಯಾ, ಚಿಕುನ್ ಗುನ್ಯ ರೋಗಗಳ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.
ಆರೋಗ್ಯ ಇಲಾಖೆಯ ಸತತ ಪ್ರಯತ್ನದ ಫಲವಾಗಿ ಇತ್ತೀಚೆಗೆ ಸಾಂಕ್ರಾಮಿಕ ರೋಗ ಪ್ರಕರಣಗಳಲ್ಲಿ ಇಳಿಮುಖವಾಗಿದೆ. ರೋಗದ ತೀವ್ರತೆಯ ಮೇಲೆ ಜನ ಆಸ್ಪತ್ರೆಗೆ ಭೇಟಿ ನೀಡುತ್ತಾರೆ. ಮಲೇರಿಯಾ, ಡೆಂಗಿ ಸೇರಿ ಯಾವುದೇ ಸಾಂಕ್ರಾಮಿಕ ರೋಗ ಕಂಡುಬಂದರೂ ರೋಗಿ ವಾಸವಿರುವ ಏರಿಯಾದಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡಿ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಡಾ ಶ್ರೀನಿವಾಸ್ ಹೇಳಿದರು.
ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್, ಶಿಕ್ಷಕರು ತಮ್ಮ ಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡುವ ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವುದರೊಂದಿಗೆ ಆರೋಗ್ಯ ಮತ್ತು ನೈರ್ಮಲ್ಯ ರಕ್ಷಣೆಗೆ ವಿಶೇಷ ಕಾಳಜಿ ವಹಿಸಬೇಕಿದೆ ಎಂದರು.
ಶಿಕ್ಷಕರು ಮಕ್ಕಳಲ್ಲಿ ಆರೋಗ್ಯ ಶಿಕ್ಷಣದ ಕುರಿತು ಅರಿವು ಮೂಡಿಸುವ ಮೂಲಕ ಸಾಂಕ್ರಾಮಿಕ ರೋಗಗಳು ಹರಡದಂತೆ ಜಾಗೃತಿ ಮೂಡಿಸಬೇಕು.
ಹದಿ ಹರೆಯದ ಮಕ್ಕಳಲ್ಲಿ ಸವಾಲುಗಳನ್ನು ಎದುರಿಸುವ ಮನೋಸ್ಥೈರ್ಯ ಹಾಗೂ
ಮಾನಸಿಕ ಆರೋಗ್ಯ ರಕ್ಷಣೆ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಸುರೇಶ್ ಹೇಳಿದರು.
“ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣದಲ್ಲಿ ಶಾಲಾ ಶಿಕ್ಷಕರ ಪಾತ್ರ” ಕುರಿತು ಮಾಹಿತಿ ನೀಡಿದ
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರೂ ಆದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾಧ್ಯಕ್ಷ ಟಿ.ಜಿ.ಪ್ರೇಮಕುಮಾರ್, ಸಮುದಾಯದಲ್ಲಿ ಆರೋಗ್ಯ, ನೈರ್ಮಲ್ಯ ಹಾಗೂ ಸ್ವಚ್ಛತೆ ಕಾಪಾಡುವುದು ಮತ್ತು ಶಾಲೆಗಳಲ್ಲಿ ಆರೋಗ್ಯ ಅರಿವು ಹಾಗೂ ಕಾರ್ಯಕ್ರಮ ನಿರ್ವಹಣೆ’ ಕುರಿತು ಮಾಹಿತಿ ನೀಡಿದರು.
ಮಕ್ಕಳ ವೈದ್ಯ ಡಾ ಶಿವಕುಮಾರ್, ‘ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ರಕ್ಷಣೆ’ ಕುರಿತು ಹಾಗ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ ‘ಆರೋಗ್ಯ ರಕ್ಷಣೆ’ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿಜ್ಞಾನ ಶಿಕ್ಷಕಿ ಎನ್.ಕೆ.ಮಾಲಾದೇವಿ ವಿಜ್ಞಾನ ಗೀತೆ ಹಾಡಿದರು. ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಎಂ.ಎನ್.ವೆಂಕಟನಾಯಕ್, ಕಾರ್ಯಾಗಾರದ ಸಂಯೋಜಕ ಜಿ.ಶ್ರೀಹರ್ಷ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ,
ಪುರಸಭೆಯ ಆರೋಗ್ಯ ನಿರೀಕ್ಷಕ ಉದಯಕುಮಾರ್, ತಾಲ್ಲೂಕು ಪಂಚಾಯ್ತಿಯ ಅಧಿಕಾರಿ ಸುರೇಶ್, ಡಾ ತೇಜಶ್ರೀ, ವೈದ್ಯರಾದ ಡಾ ನಿಶಾ, ಡಾ ದರ್ಶನ್, ಆರೋಗ್ಯ ಇಲಾಖೆಯ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಅಶ್ವಿನಿ, ನಿರೀಕ್ಷಕ ವಿಶ್ವಜ್ಞ, ತಾಲ್ಲೂಕಿನ ವಿವಿಧ ಪ್ರೌಢಶಾಲಾ ವಿಜ್ಞಾನ ಶಿಕ್ಷಕರು ಹಾಗೂ
ಆರೋಗ್ಯ ಸಿಬ್ಬಂದಿ ಹಾಜರಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*