ಮಡಿಕೇರಿ ಜು.28 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ಜು.31 ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ಆಯೋಜಿಸಿರುವ ಒಂದು ಪ್ರೇಮ ಕಥೆ ನಾಟಕ ಪ್ರದರ್ಶನಕ್ಕೆ ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಚಾಲನೆ ನೀಡಲಿದ್ದಾರೆ. ಅಂದು ರಾತ್ರಿ 7 ಗಂಟೆಗೆ ಬೆಂಗಳೂರಿನ ರಂಗಪಯಣ ತಂಡದಿಂದ ಲಿಮ್ಕಾ ಬುಕ್ ಆಫ್ ರೆಕಾರ್ಡ್‍ನಲ್ಲಿ ಸ್ಥಾನ ಪಡೆಯುವ ನಾಟಕ ಪ್ರದರ್ಶನ ಪ್ರಾರಂಭವಾಗಲಿದೆ.
ಕೊಡಗು ಬೆಳ್ಳಿ ಮಹೋತಸ್ವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಂಡ ಎಂ. ಪೂವಯ್ಯ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯಅತಿಥಿಗಳಾಗಿ ಶಕ್ತಿ ಪತ್ರಿಕೆ ಪ್ರಧಾನ ಸಂಪಾದಕ ಜಿ. ರಾಜೇಂದ್ರ, ವಾಣಿಜ್ಯೋದ್ಯಮಿತಿ ಕೆ.ಎಂ.ಬಿ. ಗಣೇಶ್, ಹಿರಿಯ ಕಲಾವಿದ ನೆರವಂಡ ಉಮೇಶ್ ಪಾಲ್ಗೊಳ್ಳಲಿದ್ದಾರೆ.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್‍ಕುಮಾರ್ ಉಪಸ್ಥಿತರಿರುತ್ತಾರೆಂದು ಪ್ರಕಟಣೆ ತಿಳಿಸಿದೆ.









