ಕುಶಾಲನಗರ ಜು.28 : ಸಮಾಜದಲ್ಲಿ ಉತ್ತಮ ನಾಗರೀಕರಾಗಿ ಜೀವನ ರೂಪಿಸಲು “ವಚನ ಸಾಹಿತ್ಯ” ಉತ್ತಮ ವೇದಿಕೆಯಾಗಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚು ಸಹಕಾರಿಯಾಗಿದೆ ಎಂದು ಕೊಡಗು ವಿಶ್ವ ವಿದ್ಯಾನಿಲಯದ ಕನ್ನಡ ಉಪನ್ಯಾಸಕ ಡಾ. ಜಮೀರ್ ಅಹಮದ್ ಹೇಳಿದರು.
ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಕುಶಾಲನಗರದ ಮೂಕಾಂಬಿಕ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ” ಶಾಲಾ ಕಾಲೇಜುಗಳೆಡೆಗೆ ವಚನ ಸಾಹಿತ್ಯದ ನಡಿಗೆ ” ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಹನ್ನೆರಡನೇ ಶತಮಾನದಲ್ಲಿ ಲಿಂಗ, ವರ್ಣ ಹಾಗೂ ವರ್ಗ ತಾರತಮ್ಯ ಇಲ್ಲದೇ ಎಲ್ಲರನ್ನೂ ಸರಿ ಸಮಾನವಾಗಿ ಕಾಣುವಂತಹ ವ್ಯವಸ್ಥೆಯನ್ನು ಅನುಭವ ಮಂಟಪದ ಮೂಲಕ ಸಮಾಜಕ್ಕೆ ಸಾರಿದವರು ಬಸವಾದಿ ಶರಣರು. ಇಂತಹ ಮಹಾ ಪುರುಷರಿಂದ ರೂಪುಗೊಂಡ ವಚನ ಸಾಹಿತ್ಯದ ಅರಿವು ಇಂದು ಅಗತ್ಯ ಎಂದು ಜಮೀರ್ ಹೇಳಿದರು.
ಇಂದಿನ ವಿದ್ಯಾರ್ಥಿಗಳು ಹಾಗೂ ಯುವ ಜನಾಂಗ ವಿವೇಕಾನಂದರ ವಿವೇಕವಾಣಿ, ಬಸವಾದಿ ಶರಣರ ವಚನವಾಣಿ ಗಳನ್ನು ಅರಿತು ಅದರಂತೆ ನಡೆದಲ್ಲಿ ಸಮಾಜದಲ್ಲಿ ತಲೆ ಎತ್ತಿ ನಡೆಯುವಂತೆ ಮಾಡುತ್ತವೆ. ಹಾಗೆಯೇ ಬಸವಣ್ಣ ನವರು ಹನ್ನೆರಡನೇ ಶತಮಾನದಲ್ಲಿ ರಚಿಸಿ ರೂಪಿಸಿದ ಕಲಬೇಡ ಕೊಲಬೇಡ ಹುಸಿಯ ನುಡಿಯಲು ಬೇಡ ಎಂಬ ಸಪ್ತ ಸೂತ್ರ ಪಾರಮಾರ್ಥಿಕ ಜೀವನದತ್ತ ಕರೆದೊಯ್ಯುತ್ತದೆ ಎಂದು ಡಾ.ಜಮೀರ್ ಹೇಳಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಹೆಚ್.ಎಸ್.ಚೇತನ್ ಮಾತನಾಡಿ, ಹನ್ನೆರಡನೇ ಶತಮಾನದಲ್ಲಿ ಸಮಾಜದಲ್ಲಿ ಕಂದಾಚಾರಗಳು ಹಾಗೂ ಅನಗತ್ಯ ಕಟ್ಟುಪಾಡುಗಳೊಂದಿಗೆ ಜನರನ್ನು ಸಂಕಷ್ಟಕ್ಕೆ ದೂಡಿದ್ದ ಬ್ರಾಹ್ಮಣ್ಯ ಹಾಗೂ ಪುರೋಹಿತಶಾಹಿ ವ್ಯವಸ್ಥೆಯ ವಿರುದ್ಧ ಸಮರ ಸಾರಿದ್ದ ಬಸವಾದಿ ಶರಣರ ಚಿಂತನೆಗಳು ಇಂದಿಗೂ ಮತ್ತು ಎಂದಿಗೂ ಸಾರ್ವಕಾಲಿಕ ಸತ್ಯವಾಗಿವೆ. ಮೊಬೈಲ್ ಗಳ ಬಳಕೆ ವಿದ್ಯಾರ್ಥಿಗಳಿಗೆ ಮಾರಕವಾಗಿರುವುದರಿಂದ ವಚನ ಸಾಹಿತ್ಯದ ಅಭ್ಯಾಸ ಹಾಗೂ ಮನನ ಇಂದು ತೀರಾ ಅನಿವಾರ್ಯ ಎಂದು ಚೇತನ್ ಅಭಿಪ್ರಾಯಪಟ್ಟರು.
ಪ್ರಾಸ್ತಾವಿಕವಾಗಿ ಮಾತನಾಡಿದ ವಚನ ಸಾಹಿತ್ಯ ವೇದಿಕೆ ಕೊಡಗು ಜಿಲ್ಲಾಧ್ಯಕ್ಷ ಕೆ.ಎಸ್.ಮೂರ್ತಿ, ಬಸವಾದಿ ಶರಣರು ಅನುಭವ ಮಂಟಪದ ಮೂಲಕ ಬರೆದು ಸಾರಿದ ಜೀವನದ ನೀತಿ ಸೂತ್ರಗಳಾದ ವಚನ ಸಾಹಿತ್ಯದ ಬಗ್ಗೆ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಶಾಲಾ ಕಾಲೇಜು ಗಳೆಡೆಗೆ ವಚನ ಸಾಹಿತ್ಯದ ನಡಿಗೆ ಎಂಬ ಕಾರ್ಯಕ್ರಮವನ್ನು ಜಿಲ್ಲಾದ್ಯಂತ ರೂಪಿಸಲಾಗುವುದು ಎಂದರು.
ಮೂಕಾಂಬಿಕ ಪಿಯು ಕಾಲೇಜು ಪ್ರಾಂಶುಪಾಲೆ ಯಶೋಧರ, ಪ್ರೌಢಶಾಲಾ ಮುಖ್ಯ ಶಿಕ್ಷಕ ಉಪನ್ಯಾಸಕರಾದ ಪ್ರಸನ್ನ, ಹೇಮಂತ್, ಶ್ರೇಣಿ, ಅನಿತಾ, ಸುರೇಶ್, ಎಸ್.ಎಸ್.ಗೋಪಾಲ್, ಶಿಕ್ಷಕರಾದ ಕಾಂತರಾಜು, ಚಂದ್ರಶೇಖರ, ಹೆಚ್.ಎಸ್.ಚೇತನ್, ಮೊದಲಾದವರಿದ್ದರು.
ವಿದ್ಯಾರ್ಥಿನಿ ಅಕ್ಷಿತಾ ನಿರೂಪಿಸಿದರು. ಶಾಲಿನಿ ತಂಡ ಪ್ರಾರ್ಥಿಸಿದರು. ಮೆಹರಾಜ್ ಪಾಶಾ ಸ್ವಾಗತಿಸಿ, ರಫೀನಾ ವಂದಿಸಿದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‌ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*