ಮಡಿಕೇರಿ ಜು.28 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಡಿಕೇರಿ ಕಚೇರಿಯಲ್ಲಿ ಕಳೆದ 6 ವರ್ಷ 8 ತಿಂಗಳ ಕಾಲ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜು ಯಲ್ಲಪ್ಪ ಭೋವಿ ಅವರು ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ವರ್ಗಾವಣೆಗೊಂಡಿರುವ ಹಿನ್ನೆಲೆ ನಗರದ ವಾರ್ತಾ ಭವನ ಕಚೇರಿಯಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ರಾಜು ಯಲ್ಲಪ್ಪ ಭೋವಿಗೆ ಶಾಲೂ, ಫಲ ತಾಂಬೂಲ ನೀಡಿ ಸನ್ಮಾನಿಸಲಾಯಿತು.
ವಾರ್ತಾಧಿಕಾರಿ ಚಿನ್ನಸ್ವಾಮಿ ಅವರು ಮಾತನಾಡಿ ರಾಜು ಯಲ್ಲಪ್ಪ ಭೋವಿ ಅವರು ಪ್ರಥಮ ದರ್ಜೆ ಸಹಾಯಕರಾಗಿ ಕಚೇರಿ ಕೆಲಸ ನಿರ್ವಹಣೆ, ಸಭೆ-ಸಮಾರಂಭ ಹಾಗೂ ಚುನಾವಣಾ ಸಂದರ್ಭದಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಥಮ ದರ್ಜೆ ಸಹಾಯಕರಾದ ರಾಜು ಯಲ್ಲಪ್ಪ ಭೋವಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ ಕಳೆದ 6 ವರ್ಷ 8 ತಿಂಗಳಿಂದ ಮಡಿಕೇರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆ ಹೊಂದಿದ್ದು, ಇಂದು ಬಿಡುಗಡೆ ಹೊಂದಿ ಹೋಗುತ್ತಿದ್ದೇನೆ. ನಾನು ಮೊದಲು ಇಲ್ಲಿ ಬಂದಾಗ ಇಲ್ಲಿಯ ವಾತಾವರಣ ಹಾಗೂ ಅಧಿಕಾರಿ ಸಿಬ್ಬಂದಿಗಳ ಸಹಕಾರದಿಂದ ಕೆಲಸಗಳನ್ನು ಕಲಿತುಕೊಳ್ಳಲು ತುಂಬಾ ಸಹಾಯವಾಯಿತು ಎಂದರು.
ವಾರ್ತಾ ಇಲಾಖೆಯ ನಿವೃತ್ತ ವಾಹನ ಚಾಲಕರಾದ ಪಿ.ಎಸ್.ಗಣೇಶ್, ಎಂ.ಎನ್.ಗಣೇಶ್, ಕಲಾವಿದ ಈ.ರಾಜು, ಸಿಬ್ಬಂದಿಗಳಾದ ಪ್ರತಾಪ್ ಎಂ.ಡಿ., ದೇವಕಿ ಎಂ., ಅಪ್ರೆಂಟಿಸ್ ಕುಸುಮ, ಪ್ರಮೋದ್, ಪ್ರತಾಪ್ ಇತರರು ಇದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*