ಮಡಿಕೇರಿ ಜು.29 :ಯುವ ಬಂಟ್ಸ್ ಅಸೋಸಿಯೇಷನ್ ಕೊಡಗು ಜಿಲ್ಲೆ ವತಿಯಿಂದ, ಕೊಡಗು ಜಿಲ್ಲಾ ಬಂಟರ ಸಂಘ, ಮಡಿಕೇರಿ ನಗರ ಬಂಟರ ಮಹಿಳಾ ಘಟಕ, ಗಾಳಿಬೀಡು ಹೋಬಳಿ ಬಂಟರ ಸಂಘದ ಸಹಯೋಗದಲ್ಲಿ ‘ಆಟಿಡೊಂಜಿ ದಿನ ಕೆಸರ್ದಗೊಬ್ಬು’ ಕಾರ್ಯಕ್ರಮ ನಡೆಯಲಿದೆ.
ಗಾಳಿಬೀಡುವಿನ ಹೊರಮಲೆ ಶಿವಪ್ರಸಾದ್ ರೈಅವರ ಭತ್ತದಗದ್ದೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಹಿಳೆಯರು, ಪುರುಷರು, ಮಕ್ಕಳು, ಹಿರಿಯರಿಗೆ ವಿವಿಧಆಟೋಟ ಸ್ಪರ್ಧೆಜರುಗಲಿದೆ. ಪುರುಷರಿಗೆ ಹ್ಯಾಂಡ್ ಬಾಲ್, ಓಟ(ವಿವಿಧ ವಿಭಾಗದಲ್ಲಿ), ಹಗ್ಗಜಗ್ಗಾಟ, ದಂಪತಿ ಓಟ, ಮಹಿಳೆಯರಿಗೆ 100 ಮೀಟರ್‍ಓಟ, ಹಗ್ಗಜಗ್ಗಾಟ, ನಿಂಬೆ ಚಮಚ, ಪಾಸಿಂಗ್ ಬಾಲ್. ಮಕ್ಕಳಿಗೆ 100 ಮೀ. ಓಟ ಹಾಗೂ ಕೆಸರುಗದ್ದೆಯಲ್ಲಿ ವಿವಿಧ ಮನೋರಂಜನಾ ಸ್ಪರ್ಧೆಜರುಗಲಿದೆ ಎಂದು ಅಸೋಸಿಯೇಷನ್ ಕಾರ್ಯದರ್ಶಿ ಚಂದ್ರಶೇಖರ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎತ್ತಿನ ಮೂಲಕ ಉಳುಮೆ ಪ್ರಾತ್ಯಕ್ಷಿಕೆ, ಸಾಂಪ್ರದಾಯಿಕ ಕೃಷಿ ಪರಿಕರಗಳ ಪ್ರದರ್ಶನ, ನಗರ ಬಂಟರ ಮಹಿಳಾ ಘಟಕದಿಂದ ಆಟಿ ವಿಶೇಷ ಖಾದ್ಯಗಳ ಪ್ರದರ್ಶನ, ತುಳುನಾಡಿನ ಜಾನಪದ ಕಲೆ ‘ಆಟಿ ಕಳೆಂಜ’ ಪ್ರದರ್ಶನವಿರಲಿದೆ.
ಉದ್ಘಾಟನಾ ಕಾರ್ಯಕ್ರಮ ಬೆಳಗ್ಗೆ 9.30ಕ್ಕೆ ನಡೆಯಲಿದೆ. ಗಾಳಿಬೀಡು ಘಟಕ ಅಧ್ಯಕ್ಷರಾದ ಸುಭಾμï ಆಳ್ವ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೃಷಿಕರಾದ ಹೊರಮಲೆ ಶಿವಪ್ರಸಾದ್ ರೈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪ್ರಮುಖರಾದ ವಸಂತರೈ, ರತ್ನಾಕರರೈ, ಬಿ.ಸಿ.ಹರೀಶ್‍ರೈ, ಶರತ್‍ಕುಮಾರ್ ಶೆಟ್ಟಿ, ಜಯಪ್ರಕಾಶ್‍ರೈ, ಸುಜಾತಗಣೇಶ್, ಶಶಿಕಲಾ ಲೋಕೇಶ್‍ರೈ, ಬೇಬಿ ಜಯರಾಮರೈ, ಶಶಿಕಿರಣ್, ಯು.ಎಸ್.ಗಿರೀಶ್ ಪಾಲ್ಗೊಳ್ಳಲಿದ್ದಾರೆ.
ಅಪರಾಹ್ನ 3.30ಕ್ಕೆ ಸಮಾರೋಪ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಜರುಗಲಿದೆ. ಅಸೋಸಿಯೇಷನ್ ಅಧ್ಯಕ್ಷ ವಸಂತ ರೈ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಜಿಲ್ಲಾ ಬಂಟರ ಸಂಘದ ಗೌರವಾಧ್ಯಕ್ಷ ಬಿ.ಬಿ.ಐತಪ್ಪ ರೈ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಮುಖರಾದ ಬಿ.ಡಿ. ಜಗದೀಶ್ ರೈ, ಬಿ.ಕೆ.ರವೀಂದ್ರ ರೈ, ರವೀಂದ್ರ ವಿ.ರೈ, ಬಿ.ಐ.ರಮೇಶ್ ರೈ, ಲೀಲಾಧರ ರೈ, ಜನಾರ್ದನ ಶೆಟ್ಟಿ, ಸೌಮ್ಯ ಶೆಟ್ಟಿ, ಅಶ್ವಿನಿ ಪುರುಷೋತ್ತಮ ರೈ, ವಿದ್ಯಾಧರ ರೈ, ನಿಖಿಲ್ ಆಳ್ವ ಪಾಲ್ಗೊಳ್ಳಲಿದ್ದಾರೆ.
Breaking News
- *ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವಾರ್ಷಿಕ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
- *ನಿಧನ ಸುದ್ದಿ*
- *ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : “ವಕ್ಫ್ ಕಾಯ್ದೆ” ಹಿಂಪಡೆಯಲು ಒತ್ತಾಯ : ಪ್ರತಾಪ್ ಸಿಂಹ ವಾಗ್ಧಾಳಿ*
- *ಶಾಲಾ ಮಕ್ಕಳ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
- *ಕನ್ನಡ ರಾಜ್ಯೋತ್ಸವ : ನ.23 ರಂದು ಮಡಿಕೇರಿಯಲ್ಲಿ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮ*
- *ಗಂಗಮ್ಮ ನಿಧನ : ಶಾಸಕ ಪೊನ್ನಣ್ಣ ಸಂತಾಪ*
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*