ನವದೆಹಲಿ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ದೇಶದ ಪ್ರತಿಯೊಂದು ಭಾಷೆಗೆ ಗೌರವ ಮತ್ತು ಮನ್ನಣೆ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಎನ್‌ಇಪಿ ಮೂರನೇ ವಾರ್ಷಿಕೋತ್ಸವ ಅಂಗವಾಗಿ ‘ಅಖಿಲ ಭಾರತೀಯ ಶಿಕ್ಷಾ ಸಮಾಗಮ್’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ವಿದ್ಯಾರ್ಥಿಗಳ ಸಾಮರ್ಥ್ಯದ ಬದಲಿಗೆ ಅವರ ಭಾಷೆಯ ಆಧಾರದ ಮೇಲೆ ಅವರನ್ನು ನಿರ್ಣಯಿಸುವುದೇ ದೊಡ್ಡ ಅನ್ಯಾಯ ಎಂದು ಹೇಳಿದರು. “ಮಾತೃಭಾಷೆಯಲ್ಲಿನ ಶಿಕ್ಷಣವು ದೇಶದಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ನ್ಯಾಯದ ಹೊಸ ರೂಪವಾಗಿದೆ. ಇದು ಸಾಮಾಜಿಕ ನ್ಯಾಯದ ಕಡೆಗೆ ಮಹತ್ವದ ಹೆಜ್ಜೆಯಾಗಿದೆ ಎಂದರು.