ಮಡಿಕೇರಿ ಜು.29 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಶನಿವಾರ ಮಾದಾಪುರ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದರು.
ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ನಡೆದ ಅಹವಾಲು ಸ್ವೀಕಾರ ಸಭೆಯಲ್ಲಿ ಸ್ಥಳೀಯರ ಸಮಸ್ಯೆಗಳಿಗೆ ಸರಕಾರ ಮಟ್ಟದಲ್ಲಿ ಆಗಬೇಕಾದ ಪರಿಹಾರ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನಂದಿಮೊಟ್ಟೆ ಕಿರುದಾಳೆ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳು ಮತ್ತು ನಂದಿಮೊಟ್ಟೆ ಗ್ರಾಮದ ಕುಸಿದ ಸೇತುವೆಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹರದೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ಸಭೆ ನಡೆಸಿ ಅಹವಾಲುಗಳನ್ನು ಸ್ವೀಕರಿಸಿದರು. ಈ ಸಂದರ್ಭ ಪ್ರಮುಖರಾದ ಕೆ.ಎಂ.ಲೋಕೇಶ್, ಬಿ.ಬಿ.ಸತೀಶ್, ಕೆ.ಎ.ಯಾಕುಬ್, ಎಸ್.ಎಂ.ಚAಗಪ್ಪ, ಮಾದಾಪುರ ವಲಯದ ಪ್ರಮುಖರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.











