ಮಡಿಕೇರಿ ಜು.30 : ನಿಷೇಧಿತ ಮಾದಕ ವಸ್ತುಗಳ ಸರಬರಾಜು ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಕೊಡಗು ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.
ಕೊಟ್ಟಮುಡಿ ನಿವಾಸಿ ರಿಜ್ವಾನ್ ಎಂ.ಎ(26) ಬಂಧಿತ ಆರೋಪಿಯಾಗಿದ್ದಾನೆ. ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಜಗದೀಶ್ ಎಂ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಉಮೇಶ್ ಯು, ಪಿಎಸ್‌ಐ ವಾಣಿಶ್ರೀ ಬಿ.ಎಸ್, ಸಿಬ್ಬಂದಿಗಳು ಹಾಗೂ ಡಿಸಿಆರ್‌ಬಿ ಅವರುಗಳನ್ನೊಳಗೊಂಡ ವಿಶೇಷ ತಂಡ ತನಿಖೆ ಕೈಗೊಂಡು ಬೆಂಗಳೂರು ದಾಸರಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸಿತು.
ಪೊಲೀಸರ ದಕ್ಷ ಕಾರ್ಯಾಚರಣೆ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮಾದಕ ವಸ್ತುಗಳನ್ನು ಬಳಸುವ ಮತ್ತು ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಂಶ/ಆಪ್‌ನ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಮನವಿ ಮಾಡಿದ್ದಾರೆ.










