ಮಡಿಕೇರಿ ಜು.30 : ಕಳೆದ ವಾರ ಸುರಿದ ಭಾರೀ ಮಳೆಯಿಂದ ಸೇತುವೆ ಮುರಿದು ಸಂಪರ್ಕ ಕಡಿದುಕೊಂಡ ದಕ್ಷಿಣ ಕೊಡಗಿನ ನಿಟ್ಟೂರು ಗ್ರಾ.ಪಂ ವ್ಯಾಪ್ತಿಯ ಚಿಣ್ಣರ ಹಾಡಿಗೆ ತೆರಳುವ ತೋಡಿಗೆ ಮಳೆಗಾಲದ ನಂತ ನೂತನ ಸೇತುವೆ ನಿರ್ಮಿಸಲಾಗುವುದು ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭರವಸೆ ನೀಡಿದ್ದಾರೆ.
ಗ್ರಾಮಕ್ಕೆ ಭೇಟಿ ನೀಡಿ ಮಳೆಹಾನಿ ಪ್ರದೇಶಗಳನ್ನು ಪರಿಶೀಲಿಸಿದ ಅವರು ಚಿಣ್ಣರ ಹಾಡಿಗೆ ತೆರಳುವ ತೋಡಿಗೆ ತಾತ್ಕಾಲಿಕವಾಗಿ ನಿರ್ಮಿಸಿರುವ ಕಾಲು ಸೇತುವೆಯನ್ನು ವೀಕ್ಷಿಸಿದರು. ಇಲ್ಲಿನ ನಿವಾಸಿಗಳ ಸಂಚಾರಕ್ಕೆ ಈ ಸೇತುವೆ ಸುರಕ್ಷಿತವಾಗಿರದೆ ಇರುವುದರಿಂದ ಮಳೆಗಾಲ ಕಳೆದ ತಕ್ಷಣ ನೂತನ ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊನ್ನಣ್ಣ ತಿಳಿಸಿದರು.
ನಿಟ್ಟೂರು ಗ್ರಾ.ಪಂ ಅಧ್ಯಕ್ಷ ಕಾಟಿಮಾಡ ಶರೀನ್ ಮುತ್ತಣ್ಣ, ಉಪಾಧ್ಯಕ್ಷೆ ಅಳಮೇಂಗಡ ಪವಿತಾ, ಸದಸ್ಯರಾದ ಚಕ್ಕೇರ ಸೂರ್ಯ ಅಯ್ಯಪ್ಪ. ಪಡಿಞರಂಡ ಕವಿತಾ ಪ್ರಭು, ಅಪ್ಪಣ್ಣ ಅಮ್ಮಣಿ, ಗ್ರಾ.ಪಂ ಮಾಜಿ ಉಪಾಧ್ಯಕ್ಷ ಪೊರಂಗಡ ಪವನ್ ಚಿಟ್ಟಿಯಪ್ಪ, ಜಿ.ಪಂ ಮಾಜಿ ಸದಸ್ಯರಾದ ಬಾನಂಡ ಪ್ರಥ್ವಿ, ಬಾಳೆಲೆ ಪಂಚಾಯ್ತಿ ಸದಸ್ಯರಾದ ಅದೇಂಗಡ ವಿನು ಉತ್ತಪ್ಪ, ತೀತೀರ ಚೋಂದಮ್ಮ, ಮೇಚಂಡ ವಿಭಿನ್, ಹಾಡಿ ಪ್ರಮುಖರಾದ ಕುಮಾರ, ಸತ್ಯ, ಪೊನ್ನ, ಬೆಂಡೆಕುತ್ತಿ ಭಾಗ್ಯ, ತಾಯು ಮತ್ತಿತರರು ಈ ಸಂದರ್ಭ ಹಾಜರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*