ಮಡಿಕೇರಿ, ಜು.30 : ಕೊಡಗಿನ ಕಾವೇರಿ ನದಿ ದಡದಲ್ಲಿ ನೂರಾರು ಬಡ ಕುಟುಂಬಗಳು ಜೀವನ ನಡೆಸುತ್ತಿದ್ದು, ಇವರಿಗೆ ಸೂಕ್ತ ಪುನರ್ವಸತಿ ಕಲ್ಪಿಸಬೇಕೆಂದು ಕೊಡಗು ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಜಾಸೀರ್ ಮೂರ್ನಾಡು ಒತ್ತಾಯ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಜಾಸೀರ್ ಮೂರ್ನಾಡು, ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭದಲ್ಲಿ ಜೀವ ಕೈಯಲ್ಲಿ ಹಿಡಿದು ನದಿ ಪಾತ್ರದ ನಿವಾಸಿಗಳು ಜೀವನ ನಡೆಸುತ್ತಿದ್ದಾರೆ. ಪ್ರವಾಹದ ಭೀತಿಯಲ್ಲಿ ಪ್ರತೀ ವರ್ಷ ಮನೆ ಖಾಲಿ ಮಾಡುತ್ತಿದ್ದಾರೆ. 2018 ರಲ್ಲಿ ಪ್ರಾಕೃತಿಕ ವಿಕೋಪದಲ್ಲಿ ಸೂರು ಕಳೆದುಕೊಂಡವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸೂರು ಒದಗಿಸಿದ್ದರು.
ಆದರೆ 2019 ರಲ್ಲಿ ಕಾವೇರಿ ನದಿ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಪುನರ್ವಸತಿ ಕಲ್ಪಿಸಲು ಜಾಗವನ್ನು ಗುರುತಿಸುವ ಕೆಲಸ ಕಳೆದ ನಾಲ್ಕು ವರ್ಷಗಳಲ್ಲಿ ಈ ಹಿಂದಿನ ಸರ್ಕಾರ ಮಾಡದೇ ಸಂತ್ರಸ್ತರ ಜೀವನದೊಂದಿಗೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಆರೋಪಿಸಿದರು.
ನದಿ ತೀರದ ನಿವಾಸಿಗಳು ಅತಂತ್ರ ಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದಾರೆ. ಸಿದ್ದಾಪುರ ಹಾಗೂ ನೆಲ್ಲಿಹುದಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳು ಮತ್ತು ಕೊಂಡಂಗೇರಿ ಗ್ರಾಮದ ನದಿ ತೀರದಲ್ಲಿ ವಾಸಿಸುವ ಬಡವರಿಗೆ ಸರ್ಕಾರ ಸೂಕ್ತ ಪುನರ್ವಸತಿ ಕಲ್ಪಿಸಬೇಕಾಗಿದೆ.
ಪ್ರತೀ ಬಾರಿ ಮಳೆಗಾಲದಲ್ಲಿ ನದಿ ತೀರದ ಮನೆಗಳಿಗೆ ನೀರು ನುಗ್ಗಿ ಸಂತ್ರಸ್ತರು ಬೀದಿಗೆ ಬರುತ್ತಿದ್ದಾರೆ.
ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಕೇವಲ ಸಂತ್ರಸ್ತರಿಗೆ ಸಾಂತ್ವನದ ಮಾತುಗಳನ್ನಾಡಿ, ಕಣ್ಣೊರೆಸುವ ತಂತ್ರ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
2019 ರಲ್ಲಿ ಉಂಟಾದ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸರ್ಕಾರ ಆದಷ್ಟು ಬೇಗ ಸೂರು ನಿರ್ಮಿಸಿಕೊಡಬೇಕು. ಇದರ ಬಗ್ಗೆ ಜಿಲ್ಲೆಯ ನೂತನ ಶಾಸಕರು ಮುತುವರ್ಜಿವಹಿಸಬೇಕಾಗಿದೆ ಎಂದು ಕೊಡಗು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಾಸೀರ್ ಮೂರ್ನಾಡು ಆಗ್ರಹಿಸಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*