ಮಡಿಕೇರಿ ಜು.31 : ಬಿಟ್ಟಂಗಾಲ ಗ್ರಾ.ಪಂ ಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯ ಮೂಕಚಂಡ ಪ್ರಸನ್ನ ಸುಬ್ಬಯ್ಯ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಎಚ್.ಜಿ.ಸರಸು ಆಯ್ಕೆಯಾಗಿದ್ದಾರೆ.
ಸೋಮವಾರದಂದು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆದ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಕಂಡಂಗಾಲ ವಾರ್ಡ್‍ನ ಪ್ರಸನ್ನ ಸುಬ್ಬಯ್ಯ ಧ್ಯಕ್ಷರಾಗಿ ಹಾಗೂ ನಾಂಗಾಲ ವಾರ್ಡ್‍ನ ಸರಸು ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಮುಂದಿನ ಎರಡೂವರೆ ವರ್ಷಗಳ ಕಾಲ ಅಧಿಕಾರ ನಿರ್ವಹಿಸಲಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನೂತನ ಅಧ್ಯಕ್ಷರು ಬಿಟ್ಟಂಗಾಲ ಗ್ರಾ.ಪಂ ಯನ್ನು ಮಾದರಿ ಪಂಚಾಯಿತಿಯನ್ನಾಗಿ ಅಭಿವೃದ್ಧಿ ಪಡಿಸುವುದಾಗಿ ತಿಳಿಸಿದರು.
ಚುನಾವಣಾಧಿಕಾರಿಯಾಗಿ ಕೃಷಿ ಇಲಾಖೆ ಅಧಿಕಾರಿ ಲವೀನಾ ಮಾದಪ್ಪ ಕಾರ್ಯನಿರ್ವಹಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ವಿರಾಜಪೇಟೆ ಮಂಡಲ ಬಿಜೆಪಿ ಅಧ್ಯಕ್ಷ ನೆಲ್ಲಿರ ಚಲನ್, ವಿರಾಜಪೇಟೆ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ವಾಟೇರಿರ ಬೋಪಣ್ಣ, ಅಜ್ಜಿಕುಟ್ಟಿರ ಪ್ರವೀಣ್, ಕಾರ್ಯದರ್ಶಿ ಅಮ್ಮುಣಿಚಂಡ ರಂಜಿ ಪೂಣಚ್ಚ, ಬಿಟ್ಟಂಗಾಲ ಗ್ರಾ.ಪಂ ಬಿಜೆಪಿ ಉಸ್ತುವಾರಿ ಪುಲಿಯಂಡ ಪೊನ್ನಣ್ಣ, ಬಿಟ್ಟಂಗಾಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಅಪ್ಪಂಡೇರಂಡ ದಿನು, ಸಹ ಪ್ರಮುಖ್ ಕುಪ್ಪಂಡ ದಿಲನ್ ಬೋಪಣ್ಣ, ಬಿಟ್ಟಂಗಾಲ ಬಿಜೆಪಿ ಕೃಷಿ ಮೋರ್ಚಾ ಅಧ್ಯಕ್ಷ ಮಚ್ಚಾರಂಡ ಪ್ರವೀಣ್, ತಾಲೂಕು ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷ ಸೀತಮ್ಮ, ಕಂಡಂಗಾಲ ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷರಾದ ಮೇಚಿಯಂಡ ಅಪ್ಪುಟ್ಟ, ಕಾರ್ಯದರ್ಶಿ ಪಾತಂಡ ಸಂತೋಷ್, ವಿ. ಬಾಡಗ ಬಿಜೆಪಿ ಬೂತ್ ಸಮಿತಿ ಕಾರ್ಯದರ್ಶಿ ತೀತಿಮಾಡ ಬೋಪಣ್ಣ, ಬಿಜೆಪಿ ಪ್ರಮುಖರಾದ ಅಮ್ಮುಣಿಚಂಡ ರೋಹಿತ್, ಅಮ್ಮೆಕಂಡ ಸುಬ್ರಮಣಿ, ಕೋಲತಂಡ ಸುಬ್ರಮಣಿ ಮತ್ತಿತರರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*