Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಗಾಳಿಬೀಡಿನಲ್ಲಿ ಗಮನ ಸೆಳೆದ ‘ಆಟಿಡೊಂಜಿ ದಿನ ಕೆಸರ್ದಗೊಬ್ಬು’ : ಆಟೋಟದ ಸಂಭ್ರಮದ ಜತೆ ಸಂಸ್ಕೃತಿಯ ಪರಿಚಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗಾಳಿಬೀಡಿನಲ್ಲಿ ಗಮನ ಸೆಳೆದ ‘ಆಟಿಡೊಂಜಿ ದಿನ ಕೆಸರ್ದಗೊಬ್ಬು’ : ಆಟೋಟದ ಸಂಭ್ರಮದ ಜತೆ ಸಂಸ್ಕೃತಿಯ ಪರಿಚಯ

ಜುಲೈ 31, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜು.31 :  ಅಬ್ಬರದ ಮಳೆ… ನಡು ನಡುವೆ ಅಲ್ಪ ಬಿಸಿಲು… ಮೈ ತಾಕುತ್ತಿದ್ದ ತಂಗಾಳಿ… ಕುಗ್ಗದ ಉತ್ಸಾಹದಲ್ಲಿ ಆಡಿ ನಲಿದು ಸಂಭ್ರಮಿಸುತ್ತಾ, ಹಿಂದಿನ ಪರಂಪರೆಯ ಬಗ್ಗೆ ಇಂದಿನ ಪೀಳಿಗೆಗೆ ತಿಳುವಳಿಕೆ ಮೂಡಿಸುವಲ್ಲಿ ಗಾಳಿಬೀಡುವಿನಲ್ಲಿ ನಡೆದ ಬಂಟ ಸಮುದಾಯದವರ ‘ಆಟಿಡೊಂಜಿ ದಿನ ಕೆಸರ್ದ ಗೊಬ್ಬು’ ಕಾರ್ಯಕ್ರಮ ಯಶಸ್ವಿಯಾಯಿತು.
ಗಾಳಿಬೀಡುವಿನ ಕೃಷಿಕ ಹೊರಮಲೆ ಶಿವಪ್ರಸಾದ್ ರೈ ಅವರ ಭತ್ತದ ಗದ್ದೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಈ ವಿಶೇಷ ಕಾರ್ಯಕ್ರಮದಲ್ಲಿ ಯುವಕರು, ಮಹಿಳೆಯರು, ಮಕ್ಕಳು, ಹಿರಿಯರು ಎಲ್ಲರೂ ವಯಸ್ಸಿನ ಅಂತರದ ಅಂಜಿಕೆಯಿಲ್ಲದೆ ಆಡಿ ನಲಿದು ಸಂಭ್ರಮಿಸಿದರು. ಕೆಸರು ಗದ್ದೆಯಲ್ಲಿ ಮನರಂಜನೆಗಾಗಿ ಹ್ಯಾಂಡ್ ಬಾಲ್, ಹಗ್ಗ ಜಗ್ಗಾಟ, ಓಟ, ಮುಂತಾದ ಸ್ಪರ್ಧೆಗಳು ನಡೆದವು. ಆಕರ್ಷಕವಾಗಿ ವಿನ್ಯಾಸಗೊಂಡಿದ್ದ ಮುಖ್ಯ ವೇದಿಕೆ ‘ಹೊರಮಲೆ ಚಾವಡಿ’ಯಲ್ಲಿ ಸಾಂಪ್ರದಾಯಿಕ ಬದುಕಿನ ಚಿತ್ರಣವನ್ನು ತಿಳಿಸುವ ಪ್ರಯತ್ನವಾಯಿತು.
ಇಂಥದ್ದೊಂದು ಅಪರೂಪದ ಕಾರ್ಯಕ್ರಮಕ್ಕೆ ವೇದಿಕೆ ಒದಗಿಸಿದ್ದು ಕೊಡಗು ಜಿಲ್ಲಾ ಯುವ ಬಂಟ್ಸ್ ಅಸೋಸಿಯೇಷನ್. ಕೊಡಗು ಜಿಲ್ಲಾ ಬಂಟರ ಸಂಘ, ಮಡಿಕೇರಿ ನಗರ ಬಂಟರ ಮಹಿಳಾ ಘಟಕ, ಗಾಳಿಬೀಡು ಹೋಬಳಿ ಬಂಟರ ಸಂಘದ ಸಹಕಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ವಿವಿಧೆಡೆಯಿಂದ 600ಕ್ಕೂ ಅಧಿಕ ಮಂದಿ ಪಾಲ್ಗೊಂಡು ಸಂಭ್ರಮಿಸಿದರು. ಯುವ ಸಮೂಹ, ಹಿರಿಯರೆಲ್ಲ ನಿತ್ಯದ ಜಂಜಡವನ್ನು ಮರೆತು ಕೆಸರಿನಲ್ಲಿ ಮಿಂದೆದ್ದು ಸಂಭ್ರಮಿಸಿದರು. ಪ್ರತಿ ದಿನ ಶಾಲೆ, ಪಠ್ಯದ ಚಟುವಟಿಕೆಗಳಲ್ಲಿ ಮಗ್ನರಾಗಿರುತ್ತಿದ್ದ ಮಕ್ಕಳು ತಮಗೆ ಸಿಕ್ಕ ಅಪರೂಪದ ಅವಕಾಶದಲ್ಲಿ ಗದ್ದೆಯಲ್ಲಿ ಆಡಿ, ನಲಿದು ಖುಷಿಪಟ್ಟರು.
ಶಿವಪ್ರಸಾದ್ ರೈ ಅವರು ಎತ್ತುಗಳನ್ನು ಬಳಸಿ ಉಳುಮೆ ಮಾಡುವುದರ ಪ್ರಾತ್ಯಕ್ಷಿಕೆ ನೀಡಿದರು. ಯಾಂತ್ರೀಕೃತ ಚಟುವಟಿಕೆ ಹೆಚ್ಚಾಗಿರುವ ಇಂದಿನ ದಿನದಲ್ಲಿ ಮರೆಯಾಗುತ್ತಿರುವ ಎತ್ತಿನ ಉಳುಮೆ ವಿಶೇಷ ಎನಿಸಿತು. ಆಟಿ ತಿಂಗಳಿನಲ್ಲಿ ತುಳುನಾಡಿನಲ್ಲಿ ಕಾಣ ಸಿಗುವ ಆಟಿ ಕಳೆಂಜ ಪ್ರದರ್ಶನ ಜನರನ್ನು ಆಕರ್ಷಿಸಿತು. ವೇಷ ಧರಿಸಿ, ತೆಂಬರೆ ಭಾರಿಸುತ್ತಾ ಗದ್ದೆ, ವೇದಿಕೆ ಬಳಿ ಸಾಗಿದ ಕಲಾವಿದರ ಜತೆಗೆ ಫೋಟೋ ತೆಗೆಸಿಕೊಳ್ಳುತ್ತಾ ವಿಶೇಷ ಕ್ಷಣವನ್ನು ಅನುಭವಿಸಿದರು. ಬಂಟ ಸಮುದಾಯದಿಂದ ಮೊದಲ ಬಾರಿಗೆ ನಡೆದ ಈ ಕಾರ್ಯಕ್ರಮದಲ್ಲಿ ಗ್ರಾಮದ ಇತರೆ ಸಮುದಾಯದ ಬಂಧುಗಳು ಕೂಡಾ ಪಾಲ್ಗೊಂಡು, ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಆಟಿ ಖಾದ್ಯಗಳ ಪ್ರದರ್ಶನ : ಚಳಿ ದೂರ ಮಾಡಲು ಬಿಸಿ ಬಿಸಿ ಬೆಲ್ಲದ ಕಾಫಿ ವಿತರಿಸಲಾಯಿತು. ಮಧ್ಯಾಹ್ನ ನಗರ ಮಹಿಳಾ ಘಟಕದಿಂದ ಆಟಿ ಸಂದರ್ಭದಲ್ಲಿ ಸೇವಿಸುವ ವಿಶೇಷ ಖಾದ್ಯಗಳ ಪ್ರದರ್ಶನ ನಡೆಯಿತು. ಮರುವಾಯಿ ಕಡುಬು, ಪತ್ರೊಡೆ, ಕೆಸ ಸಾರು, ಅಕ್ಕಿ ಕಡುಬು, ಸೀಗಡಿ ಚಟ್ನಿ, ಕಡ್ಲೆ ಬಲಿಯಾರ್, ಅಣಬೆ ಸಾರು, ಕಡ್ಲೆ ಬೇಳೆ ಮತ್ತು ಹೆಸರುಕಾಳು ಪಾಯಸ, ನಾಟಿ ಕೋಳಿ ಸಾರು, ಅರಶಿನ ಎಲೆ ಗಟ್ಟಿ, ಹಲಸಿನ ಗಟ್ಟಿ, ಮೂಡೆ, ನೀರ್ದೋಸೆ ಕೋಳಿ ಸಾರು ಮುಂತಾದ ಖಾದ್ಯಗಳನ್ನು ಮನೆಯಿಂದ ತಯಾರಿಸಿ ತಂದು, ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಗೆ ಹಂಚಿದರು.
ಗಾಳಿಬೀಡು ಹೋಬಳಿ ಅಧ್ಯಕ್ಷ ಸುಭಾಷ್ ಆಳ್ವ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಕೃಷಿಕ ಹೊರಮಲೆ ಶಿವಪ್ರಸಾದ್ ರೈ ಉದ್ಘಾಟಿಸಿದರು. ಅಸೋಸಿಯೇಷನ್ ಉಪಾಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ವಸಂತ ರೈ, ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಬಿ.ಡಿ. ಜಗದೀಶ್ ರೈ, ಕಾರ್ಯದರ್ಶಿ ರವೀಂದ್ರ ವಿ. ರೈ, ಸಹಕಾರ್ಯದರ್ಶಿ ಬಿ.ಸಿ. ಹರೀಶ್ ರೈ, ಉದ್ಯಮಿ ಜಯಪ್ರಕಾಶ್ ರೈ, ನಗರ ಮಹಿಳಾ ಘಟಕ ಕಾರ್ಯದರ್ಶಿ ಸುಜಾತ ಗಣೇಶ್, ಉಪಾಧ್ಯಕ್ಷೆ ಬೇಬಿ ಜಯರಾಮ್ ರೈ ವೇದಿಕೆಯಲ್ಲಿದ್ದರು. ಉಪನ್ಯಾಸಕಿ ಪ್ರತಿಮಾ ಹರೀಶ್ ರೈ ‘ಆಟಿ ತಿಂಗಳು ಮತ್ತು ಬಂಟ ಸಮುದಾಯ’ ವಿಷಯವಾಗಿ ವಿಚಾರ ಮಂಡಿಸಿದರು.
ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ::  ಸಂಜೆ ವಸಂತ ರೈ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಕೊಡಗು ಜಿಲ್ಲಾ ಬಂಟರ ಸಂಘದಿಂದ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಇದೇ ವೇಳೆ ಸಮುದಾಯದ ಸಾಧಕರಾದ ವಿ.ಡಿ. ದೀಕ್ಷಿತ್ ಶೆಟ್ಟಿ(ಸೇನಾ ಕ್ಷೇತ್ರ), ಪ್ರತಿಮಾ ಹರೀಶ್ ರೈ(ಶಿಕ್ಷಣ, ಸಾಹಿತ್ಯ), ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಕೃಷಿಕ ಹೊರಮಲೆ ಶಿವಪ್ರಸಾದ್ ರೈ, ಕಾರ್ಯಕ್ರಮ ಸಂಚಾಲಕ ನಿಖಿಲ್ ಆಳ್ವ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಜಿಲ್ಲಾಧ್ಯಕ್ಷ ಜಗದೀಶ್ ರೈ, ಗೌರವಾಧ್ಯಕ್ಷ ಬಿ.ಬಿ. ಐತಪ್ಪ ರೈ, ಉಪಾಧ್ಯಕ್ಷ ಬಿ.ಕೆ. ರವೀಂದ್ರ ರೈ, ಮಡಿಕೇರಿ ತಾಲೂಕು ಅಧ್ಯಕ್ಷ ರಮೇಶ್ ರೈ, ವಿರಾಜಪೇಟೆ ತಾಲೂಕು ಅಧ್ಯಕ್ಷ ಲೀಲಾಧರ ರೈ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಜನಾರ್ಧನ ಶೆಟ್ಟಿ, ನಗರ ಮಹಿಳಾ ಘಟಕ ಅಧ್ಯಕ್ಷೆ ಸೌಮ್ಯ ಶೆಟ್ಟಿ ಮುಂತಾದವರಿದ್ದರು. ಹಿತ ಯೋಗೇಶ್ ಶೆಟ್ಟಿ ಪ್ರಾರ್ಥಿಸಿದರು. ಬಾಲಕೃಷ್ಣ ರೈ ಸ್ವಾಗತಿಸಿದರು. ಕಿಶೋರ್ ರೈ ಕತ್ತಲೆಕಾಡು ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಸೋಮವಾರಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದತ್ತಿನಿಧಿ ಕಾರ್ಯಕ್ರಮ; ವಿವಿಧ ವಿಷಯಗಳ ಕುರಿತು ಉಪನ್ಯಾಸ, ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಸ್ಪರ್ಧೆ

ನವೆಂಬರ್ 4, 2026

ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆ

ನವೆಂಬರ್ 4, 2026

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆ

ನವೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ನ.4: ಹಾಸನದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ವಿಭಾಗ ಮಟ್ಟದ ಕ್ರೀಡಾಕೂಟದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಆಂಗ್ಲ ಮಾಧ್ಯಮ…

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಗೆ ಚಾಲನೆ

ನವೆಂಬರ್ 4, 2026

ಕನ್ನಡ ಭಾಷೆಯ ಉಳಿವು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ; ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 4, 2026

ಮೂರ್ನಾಡು ಭಾರತೀಯ ನೃತ್ಯ ಕಲಾ ಶಾಲೆಗೆ ಶೇ.100ರಷ್ಟು ಫಲಿತಾಂಶ; ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 4, 2026

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಡ್ಡಂಡ ಕಾರ್ಯಪ್ಪ ಅವರಿಗೆ ಮಸಿ ಬಳಿದ ಘಟನೆ ಖಂಡನೀಯ: ಬಿಜೆಪಿ ರೈತ ಮೋರ್ಚಾ

ನವೆಂಬರ್ 4, 2026

ಬಾಲ್ಯದಿಂದಲೇ ಸ್ವಚ್ಛತೆಯ ಹವ್ಯಾಸ ಬೆಳೆಸುವುದು ಅವಶ್ಯ: ಸೀತಾಲಕ್ಷ್ಮಿ

ನವೆಂಬರ್ 4, 2026

ಪೇರಿಯಂಡ ಪೆಮ್ಮಯ್ಯ ದಂಪತಿ ಸ್ಥಾಪಿಸಿದ ಪ್ರಥಮ ವರ್ಷದ ಸಾಹಿತ್ಯ ಪ್ರಶಸ್ತಿಗೆ ಡಾ. ಕೋರನ ಸರಸ್ವತಿ ಆಯ್ಕೆ

ನವೆಂಬರ್ 3, 2026

ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಸಾಹಿತಿ ಉಳುವಂಗಡ ಕಾವೇರಿ ಉದಯ್ ಆಯ್ಕೆ

ನವೆಂಬರ್ 3, 2026

ಸಾಹಿತಿ ನಾ. ಡಿಸೋಜಾ ವಿಶ್ವಮಾನವತ್ವ ಮೇಳೈಸಿದ ದಾರ್ಶನಿಕ: ಎಸ್.ಐ. ಮುನೀರ್ ಅಹಮದ್

ನವೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.