ಮಡಿಕೇರಿ ಜು.31 : ಜಿಲ್ಲಾಡಳಿತ, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ವತಿಯಿಂದ ಆ.1 ರಂದು ಬೆಳಗ್ಗೆ 11 ಗಂಟೆಗೆ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ‘ವ್ಯಸನ ಮುಕ್ತ ದಿನಾಚರಣೆ’ಯು ನಗರದ ಜೂನಿಯರ್ ಕಾಲೇಜಿನಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಹಿರಿಯ ನಾಗರಿಕರ ಮತ್ತು ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ, ವೈದ್ಯಕೀಯ ಕಾಲೇಜಿನ ಮನೋವೈದ್ಯರಾದ ಡೆವಿನ್ ಕರ್ಕಡ ಇತರರು ಪಾಲ್ಗೊಳ್ಳಲಿದ್ದಾರೆ.










