ಮಡಿಕೇರಿ ಜು.31 : 2021-22 ನೇ ಸಾಲಿನ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದಿಂದ ಸಫಾಯಿ ಕರ್ಮಚಾರಿ, ಮಾನ್ಯುಯಲ್ ಸ್ಕ್ಯಾವೆಂಜರ್ಸ್, ಪೌರಕಾರ್ಮಿಕರ ಮಕ್ಕಳಿಗೆ ಆನ್‍ಲೈನ್ ಪಾಠ ಕೇಳಲು ಹಾಗೂ ವಿದ್ಯಾಭ್ಯಾಸದ ಅನುಕೂಲಕ್ಕೆ ಟ್ಯಾಬ್ ನ್ನು ನಿಗಮದ ವತಿಯಿಂದ ಉಚಿತವಾಗಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆದ್ದರಿಂದ ಸಫಾಯಿ ಕರ್ಮಚಾರಿ, ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್, ಪೌರ ಕಾರ್ಮಿಕರ 8, 9, ಮತ್ತು 10 ನೇ ತರಗತಿ, ಪ್ರಥಮ ಪಿಯುಸಿ ಮತ್ತು ಎರಡನೇ ಪಿಯುಸಿ ಓದುತ್ತಿರುವ ಮಕ್ಕಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇಚ್ಛಿಸುವ ಅರ್ಹ ಫಲಾಪೇಕ್ಷಿಗಳು ಒಂದು ವಾರದೊಳಗೆ ಜಾತಿ ಪತ್ರ, ಆದಾಯ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್ ಪಡಿತರ ಚೀಟಿ, ಅಂಕಪಟ್ಟಿ, ಫೋಟೋ, ಸಫಾಯಿ ಕರ್ಮಚಾರಿ ಮ್ಯಾನುವಲ್ ಸ್ಕ್ಯಾವೆಂಜರ್ಸ್ ಪೌರ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ, ನಮೂನೆ-5 ನ್ನು ಸರ್ವೇಕ್ಷಣ ಅಧಿಕಾರಿಗಳಿಂದ ಭರ್ತಿ ಮಾಡಿ ದೃಢೀಕರಿಸಿ ನೀಡುವುದು. ಈ ದಾಖಲಾತಿಗಳ ಎರಡು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ ಕೊಡಗು ಜಿಲ್ಲೆ 571201 ದೂ.ಸಂ.08272-228857 ನ್ನು ಸಂಪರ್ಕಿಸಬಹುದು ಎಂದು ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.








