Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾನವ ಕಳ್ಳ ಸಾಗಾಣಿಕೆ ತಡೆಯಿರಿ : ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾನವ ಕಳ್ಳ ಸಾಗಾಣಿಕೆ ತಡೆಯಿರಿ : ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್*

ಜುಲೈ 31, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.31 : ಮಕ್ಕಳು ಮತ್ತು ಮಹಿಳೆಯರ ಮೇಲೆ ನಡೆಯುವ ನಿರಂತರ ಶೋಷಣೆ, ದೌರ್ಜನ್ಯ, ಹಿಂಸೆ ನಿಲ್ಲಬೇಕು. ಜೊತೆಗೆ ಮಕ್ಕಳನ್ನು ಬಿಕ್ಷಾಟನೆ, ದುಡಿಮೆಗೆ ದೂಡುವುದು ತಪ್ಪಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಂದಾಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಾರ್ಮಿಕ, (ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ), ಪೊಲೀಸ್, ಸಮಾಜ ಕಲ್ಯಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ವತಿಯಿಂದ ‘ಮಾನವ ಕಳ್ಳ ಸಾಗಾಣಿಕೆ ತಡೆ’ ಕುರಿತು ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಂವಿಧಾನದಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ವಿಶೇಷ ಸ್ಥಾನ ನೀಡಲಾಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳು ಮಹಿಳೆಯರು ಮತ್ತು ಮಕ್ಕಳಿಗೆ ತಲುಪಬೇಕು. ಮಹಿಳೆಯರು ಮತ್ತು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರು ನುಡಿದರು.
ಮಕ್ಕಳ ಕಳ್ಳ ಸಾಗಾಣಿಕೆ ತಡೆಯುವಲ್ಲಿ ಎಲ್ಲರೂ ಎಚ್ಚರವಹಿಸಬೇಕಿದೆ. ಕೊಡಗು ಜನಸಂಖ್ಯೆಯಲ್ಲಿ ಚಿಕ್ಕ ಜಿಲ್ಲೆಯಾದರೂ ಸಹ ನಾಪತ್ತೆ, ಕಳ್ಳ ಸಾಗಾಣಿಕೆ ಪ್ರಕರಣಗಳು ಅಲ್ಲಲ್ಲಿ ಕಂಡು ಬರುತ್ತಿವೆ ಎಂದರು.
ಮಾನವ ಕಳ್ಳ ಸಾಗಾಣಿಕೆ ಕಂಡು ಬಂದರೆ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಮಾಹಿತಿ ನೀಡುವಂತಾಗಬೇಕು. ಮಕ್ಕಳಿಗೆ ಪುನರ್ ವಸತಿ ಕಲ್ಪಿಸುವಂತಾಗಬೇಕು ಎಂದರು.
ಪ್ರತಿಯೊಬ್ಬರಿಗೂ ಬದುಕುವ ಹಕ್ಕು, ಶೋಷಣೆಯ ವಿರುದ್ಧದ ಹಕ್ಕು, ಉಚಿತ ಶಿಕ್ಷಣ ಪಡೆಯುವ ಹಕ್ಕು, ಸರ್ಕಾರ ನೀಡಿರುವಂತಹ ಸೌಲಭ್ಯಗಳನ್ನೂ ಪಡೆಯುವ ಹಕ್ಕು ಇವೆಲ್ಲವನ್ನೂ ಮಹಿಳೆಯರು ಮತ್ತು ಮಕ್ಕಳಿಗೆ ತಲುಪುವಂತೆ ಮಾಡಬೇಕು. ಇದರಿಂದ ಮಾನವ ಕಳ್ಳಸಾಗಣೆ ತಡೆಯಬಹುದಾಗಿದೆ ಎಂದರು.
‘ಮಕ್ಕಳ ವಿಶೇಷ ಪೊಲೀಸ್ ಘಟಕದ ಹೆಡ್ ಕಾನ್ಸ್‍ಟೇಬಲ್ ಸುಮತಿ ಅವರು ಮಾತನಾಡಿ ಜಿಲ್ಲೆಯಲ್ಲಿ ಕಳೆದ 6 ತಿಂಗಳಲ್ಲಿ ಕಾಣೆಯಾದ 31 ಮಕ್ಕಳ ಪ್ರಕರಣಗಳು ದಾಖಲಾಗಿದ್ದು, 31 ರಲ್ಲಿ 28 ಮಕ್ಕಳನ್ನು ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಲಾಗಿದೆ. ಉಳಿದ ಮೂವರು ಮಕ್ಕಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.’
ಮಹಿಳೆಯರು ಕೆಲಸದಲ್ಲಿ ಶೋಷಣೆ, ವಂಚನೆಗೆ ಒಳಪಡುವುದು ಹೆಚ್ಚಾಗಿ ಕಂಡು ಬರುತ್ತದೆ. ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು. ಮಹಿಳೆಯರು ಆಸೆ ಆಮಿಷಗಳಿಗೆ ತುತ್ತಾಗದೆ ಪ್ರಶ್ನೆ ಮಾಡುವ ಮತ್ತು ವಿಮರ್ಶಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಮಹಿಳೆಯರು ಮತ್ತು ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವಿರಬೇಕು ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ಅವರು ಮಾನವ ಕಳ್ಳ ಸಾಗಾಣಿಕೆಯಿಂದ ತಡೆಯಲು, ಸಂಕಷ್ಟದಲ್ಲಿರುವ ಜನರನ್ನು ರಕ್ಷಿಸಲು ಹಾಗೂ ಸಾಗಾಣಿಕೆಗೆ ಒಳಪಟ್ಟವರಿಗೆ ಸೂಕ್ತ ನ್ಯಾಯ ಒದಗಿಸಲು ಮುಡುಪಾಗಿಡಬೇಕು. ಸಂವಿಧಾನದಲ್ಲಿ ನೀಡಿರುವ ಸಮಾನತೆಯನ್ನು ಸಾಧಿಸಲು ಪ್ರಾಮಾಣಿಕ ಪ್ರಯತ್ನ ಮಾಡುವ ಮನಸ್ಸು ಇರಬೇಕು ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.
ಉಪ ಪ್ರಧಾನ ಕಾನೂನು ನೆರವು ಅಭಿರಕ್ಷಕರಾದ ಎಂ.ವೈ.ಮೈಮೂನ ಅವರು ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜ, ಸಿಡಿಪಿಒ ಸೀತಾಲಕ್ಷ್ಮಿ, ವಕೀಲರಾದ ಕೆ.ಆರ್.ವಿದ್ಯಾಧರ, ಮಕ್ಕಳ ವಿಶೇಷ ಪೊಲೀಸ್ ಘಟಕದ ಹೆಡ್‍ಕಾನ್ಸ್‍ಟೇಬಲ್ ಮಹೇಶ್ ಕುಮಾರ್, ಬಾಲ ಕಾರ್ಮಿಕ ಸೊಸೈಟಿಯ ಯೋಜನಾ ನಿರ್ದೇಶಕರಾದ ಸಿರಾಜ್ ಅಹಮದ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ವನ್ಯಜೀವಿ ಹಾಗೂ ಮಾನವನ ನಡುವಿನ ಸಂಘರ್ಷ ಕೈಮೀರಿ ಹೋಗಿದೆ. ಕಳೆದ…

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.