ಮಡಿಕೇರಿ ಆ.1 : ಕೊಡಗು ಜಿಲ್ಲೆಗೆ ದೂರ ಸಂಪರ್ಕ ಕಲ್ಪಿಸುವ ಸಂಬಂಧ ಕ್ರಮ ಕೈಗೊಳ್ಳುವಂತೆ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ರೈಲ್ವೆ, ಸಂವಹನ, ಎಲೆಕ್ಟ್ರಾನಿಕ್ ಮತ್ತು ಐಟಿ ಖಾತೆಯ ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾಗಿ, ರೈಲ್ವೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನವಿ ಸಲ್ಲಿಸಿದರು. ನಂತರ ಭಾರತ ಸರ್ಕಾರದ 4ಜಿ ಸ್ಯಾಚುರೇಷನ್ ಯೋಜನೆ ಕಾರ್ಯಕ್ರಮದ ಅಡಿಯಲ್ಲಿ ಕೊಡಗು ಜಿಲ್ಲೆಯಲ್ಲಿ ದೂರ ಸಂಪರ್ಕ ಜಾಲವಿಲ್ಲದ ಗ್ರಾಮಗಳಿಗೆ ದೂರ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಲು ಹೊಸದಾದ ಟವರ್‍ಗಳು ಹಾಗೂ ಅಗತ್ಯವಿರುವ ಬ್ಯಾಟರಿಗಳಿಗೆ ಅನುಮೋದನೆ ನೀಡುವಂತೆ ಬೇಡಿಕೆ ಮುಂದಿಟ್ಟರು. ಸಂಸದರ ಮನವಿಗೆ ಸಚಿವರು ಸಕಾರಾತ್ಮಕ ಭರವಸೆ ನೀಡಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.







