ಮಡಿಕೇರಿ ಆ.1 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿದರು.
ಕುಶಾಲನಗರ ಪ್ರವಾಸಿ ಮಂದಿರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು ಹಾಗೂ ಆಯಾ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಅಹವಾಲು ಸ್ವೀಕರಿಸಿದರು.
ಈ ಸಂದರ್ಭ ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಶಾಸಕರಿಗೆ ವಿವರಿಸಿ, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಅದೇ ಸಂದರ್ಭ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸಾರ್ವಜನಿಕರ ಸಮಸ್ಯೆಗೆ ತಕ್ಷಣವೇ ಸ್ಪಂದಿಸುವಂತೆ ಸೂಚಿಸಿದರು.
ಮುಖಂಡರಾದ ವಿ.ಪಿ.ಶಶಿಧರ್, ಪ್ರಮೋದ್, ಮಂಜುನಾಥ್ ಗುಂಡುರಾವ್, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.