ಮಡಿಕೇರಿ ಆ.1 : ಕೊಡಗು ಜಿಲ್ಲಾ ಪೊಲೀಸ್ ಘಟಕದ ವಿವಿಧ ಠಾಣೆ, ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸಿ ಜು.31 ರಂದು ನಿವೃತ್ತಿ ಹೊಂದಿದ ಸಿಪಿಐ ಹೆಚ್.ಜೆ ಶಿವಶಂಕರ್, ಎಎಸ್‌ಐ ಟಿ.ಎಂ ಸುರೇಶ್, ಎಎಸ್‌ಐ ಕೆ.ಹೆಚ್ ಮೊಹಿದೀನ್ ಅವರನ್ನು ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.